ಗುವಾಹಟಿ: ಅಸ್ಸಾಂನ ಕಾಂಗ್ರೆಸ್ ಶಾಸಕ ರೂಪಜ್ಯೋತಿ ಕುರ್ಮಿ ಶುಕ್ರವಾರ ರಾಜೀನಾಮೆ ನೀಡಿದ್ದು, ಶೀಘ್ರ ಬಿಜೆಪಿ ಸೇರಲಿದ್ದಾರೆ.
ವಿಧಾನಸಭೆ ಕಚೇರಿಯಲ್ಲಿ ಸ್ಪೀಕರ್ ಬಿಸ್ವಜೀತ್ ದೈಮಾರಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ರಾಜೀನಾಮೆಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿರುವುದಾಗಿ ಕುರ್ಮಿ ತಿಳಿಸಿದ್ದಾರೆ.
ನಾಲ್ಕು ಬಾರಿ ಶಾಸಕರಾಗಿರುವ ಕುರ್ಮಿ ಜೂನ್ 21ರಂದು ಬಿಜೆಪಿ ಸೇರಲಿದ್ದಾರೆ. ಇದೇ ವೇಳೆ, ಪಕ್ಷ ವಿರೋಧಿ ಚಟುವಟಿಕೆಗಾಗಿ ಕುರ್ಮಿ ಅವರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ.
ಬುಡಕಟ್ಟು ಸಮುದಾಯಕ್ಕೆ ಸೇರಿರುವ ಕುರ್ಮಿ ಅವರು, ಮರಿಯಾನಿ ಕ್ಷೇತ್ರದಿಂದ 2006ರಿಂದ ಆಯ್ಕೆಯಾಗುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.