ADVERTISEMENT

ಅಸ್ಸಾಂ ಈಗ ಅಭಿವೃದ್ಧಿ, ಶಿಕ್ಷಣ, ಪ್ರವಾಸೋದ್ಯಮಕ್ಕೆ ಹೆಸರುವಾಸಿ: ಅಮಿತ್ ಶಾ

ಏಜೆನ್ಸೀಸ್
Published 25 ಫೆಬ್ರುವರಿ 2021, 11:12 IST
Last Updated 25 ಫೆಬ್ರುವರಿ 2021, 11:12 IST
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ   

ಗುವಾಹಟಿ: ಅಸ್ಸಾಂ ಪರಿವರ್ತನೆಯನ್ನು ಎತ್ತಿ ತೋರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯವು ಈಗ ಅಭಿವೃದ್ಧಿ, ಕೈಗಾರಿಕಾ ಹೂಡಿಕೆ, ಶಿಕ್ಷಣ ಹಾಗೂ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ ಎಂದು ಹೇಳಿದರು.

ಹಿಂದೆಲ್ಲ ಪ್ರತಿಭಟನೆ, ಶಸ್ತಾಸ್ತ್ರ, ಹಿಂಸಾಚಾರಗಳಿಗೆ ಹೆಸರುವಾಸಿಯಾಗಿದ್ದ ಅಸ್ಸಾಂ ಈಗ ಅಭಿವೃದ್ಧಿ, ಕೈಗಾರಿಕಾ ಹೂಡಿಕೆ, ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕೆಗುರುತಿಸಿದೆ ಎಂದು ನಾಗೌನ್ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯಲ್ಲಿ ಹೇಳಿದರು.

ಮಾತು ಮುಂದುವರಿಸಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಮತ್ತು ಸಚಿವ ಸಂಪುಟ ಸಚಿವ ಹಿಮಂತ ಬಿಸ್ವಾ ಶರ್ಮಾ ಪ್ರಾರಂಭಿಸಿದ ಹೊಸ ಯುಗದ ಅಭಿವೃದ್ಧಿಯ ಮೊದಲ ಹೆಜ್ಜೆ ಇದಾಗಿದೆ ಎಂದು ಹೇಳಿದರು.

ADVERTISEMENT

ಪ್ರವಾಹ ಮುಕ್ತ, ಒಳನುಸುಳುವಿಕೆ ಮುಕ್ತ ಮತ್ತು ಹಿಂಸಾಚಾರ ಮುಕ್ತವನ್ನಾಗಿಸಿ ಈಶಾನ್ಯ ರಾಜ್ಯವನ್ನು ದೇಶದ ಅತಿ ದೊಡ್ಡ ಜಿಡಿಪಿ ಕೊಡುಗೆದಾರರನ್ನಾಗಿ ಮಾಡಬೇಕಿದೆ ಎಂದು ಹೇಳಿದರು.

ಈಶಾನ್ಯದ ಎಲ್ಲ ಎಂಟು ರಾಜ್ಯಗಳಲ್ಲಿ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಅಧಿಕಾರದಲ್ಲಿದೆ. ಶಿಕ್ಷಣ ಹಾಗೂ ಪ್ರವಾಸೋದ್ಯಮದಂತಹ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಬಹುದು ಎಂಬುದನ್ನು ಅಸ್ಸಾಂ ಜನರು ಅರಿತುಕೊಂಡಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 'ಮಹಾ ಮೃತ್ಯುಂಜಯ್' ದೇವಸ್ಥಾನಕ್ಕೆ ಭೇಟಿ ನೀಡಿದ ಅಮಿತ್ ಶಾ, 'ಪ್ರಾಣ ಪತಿಷ್ಠಾ ಮಹೋತ್ಸವ'ದಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.