ADVERTISEMENT

ಮಣಿಪುರ | ವಿಧ್ವಂಸಕ ಚಟುವಟಿಕೆಗಳಲ್ಲಿ ಭಾಗಿ ಆರೋಪ: ವ್ಯಕ್ತಿ ಬಂಧನ

ಪಿಟಿಐ
Published 16 ಸೆಪ್ಟೆಂಬರ್ 2024, 16:13 IST
Last Updated 16 ಸೆಪ್ಟೆಂಬರ್ 2024, 16:13 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಇಂಫಾಲ್‌: ಮಣಿಪುರದಲ್ಲಿ ವಿಧ್ವಂಸಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಚುರಾಚಂದಪುರದ 34 ವರ್ಷದ ನಿವಾಸಿಯೊಬ್ಬರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಗುವಾಹಟಿಯ ಬಸಿಷ್ಠ ಠಾಣೆಯ ವಿಶೇಷ ಕಾರ್ಯಪಡೆಯು ಸೆಪ್ಟೆಂಬರ್‌ 13ರಂದು ಬಂಧಿಸಿದೆ ಎಂದು ಮಾಹಿತಿ ನೀಡಿದರು.

ADVERTISEMENT

‘ಈತ ಯುನೈಟೆಡ್‌ ಕುಕಿ ನ್ಯಾಷನಲ್‌ ಆರ್ಮಿಯ ಸ್ವಯಂಘೋಷಿತ ವಿತ್ತ ಕಾರ್ಯದರ್ಶಿಯಾಗಿದ್ದು,  ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ–2ರ ಮೇಲಿನ ಸೇತುವೆ ಸ್ಫೋಟ ಮತ್ತು ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಲಿ. ಬೆಂಗಾವಲು ವಾಹನದ ಮೇಲಿನ ದಾಳಿ ಸೇರಿದಂತೆ ಹಲವು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ’ ಎಂದು ತಿಳಿಸಿದ್ದಾರೆ.

ಇಂಟರ್‌ನೆಟ್‌ ನಿಷೇಧ ಹಿಂದಕ್ಕೆ: ಸೋಮವಾರವಷ್ಟೇ ರಾಜ್ಯದ ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೊಬೈಲ್‌ ಇಂಟರ್‌ನೆಟ್‌ ಸೇವೆಗೆ ವಿಧಿಸಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ. ಸೆ.10ರಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಇಂಫಾಲ ಪೂರ್ವ, ಇಂಫಾಲ ಪಶ್ಚಿಮ, ತೌಬಾಲ್‌, ಕಕ್‌ಚಿಂಗ್‌ ಹಾಗೂ ಬಿಷ್ಣುಪುರ ಜಿಲ್ಲೆಗಳಲ್ಲಿ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ನಿರ್ಬಂಧಿಸಿತ್ತು. 

ಕಾನೂನು ಹಾಗೂ ಸುವ್ಯವಸ್ಥೆ ಸುಧಾರಿಸಿದ ಹಿನ್ನೆಲೆಯಲ್ಲಿ ಮಂಗಳವಾರದಿಂದ ಶೈಕ್ಷಣಿಕ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.