
ನವದೆಹಲಿ: ಹೊಸ ವರ್ಷಾಚರಣೆ ಪ್ರಯುಕ್ತ ಕುಡಿದು ವಾಹನ ಚಲಾಯಿಸುವುದರ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಅಸ್ಸಾಂ ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್‌ಗೆ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಸ್ಸಾಂ ಪೊಲೀಸರು 'ಡ್ರಂಕ್ ಡ್ರೈವರ್ಸ್ ವಾಂಟೆಡ್' ಮತ್ತು 'ಅಸ್ಸಾಂ ಪೊಲೀಸ್ ಪ್ರೆಸೆಂಟ್ಸ್ ನ್ಯೂ ಇಯರ್ ಪಾರ್ಟಿ' ಎನ್ನುವ ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಆ ಪೋಸ್ಟರ್‌ಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿರುವ ಉದ್ಯಮಿ ಆನಂದ್ ಮಹೀಂದ್ರಾ ಅವರು 'ಪ್ರತಿ ವರ್ಷವೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ, ದೇಶದಲ್ಲಿರುವ ಎಲ್ಲಾ ಪೊಲೀಸ್ ಪಡೆಗಳು ತಮ್ಮ ಸೃಜನಶೀಲತೆಯನ್ನು ಉಪಯೋಗಿಸಿಕೊಂಡು ಸಂದೇಶಗಳನ್ನು ಕಳಿಸುತ್ತಾರೆ. ಈ ಬಾರಿ ಅಸ್ಸಾಂ ಪೊಲೀಸರು ಕುಡಿದು ವಾಹನ ಚಲಾಯಿಸುದರ ವಿರುದ್ಧ ವಿಭಿನ್ನ ಪೋಸ್ಟರ್ ಮೂಲಕ ನೀಡಿರುವ ಸಂದೇಶವು ಗಮನ ಸೆಳೆದಿದೆ. ಡಿಜಿಪಿ ಹರ್ಮೀತ್ ಸಿಂಗ್ ನೇತೃತ್ವದ ಅಸ್ಸಾಂ ಪೊಲೀಸರು ಈ ಬಾರಿ ತಮ್ಮ ಸೃಜನಶೀಲತೆಯನ್ನು ತೋರಿಸಿದ್ದಾರೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಸ್ಸಾಂ ಪೊಲೀಸರ ಈ ಪೋಸ್ಟ್‌ಗಳಿಗೆ ನೆಟ್ಟಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.