ADVERTISEMENT

ಅಸ್ಸಾಂ: ಹಿಮಂತ ಬಿಸ್ವ ಶರ್ಮಾ ಪ್ರಚಾರ ನಿರ್ಬಂಧ ಅವಧಿ ಕಡಿತಗೊಳಿಸಿದ ಚುನಾವಣಾ ಆಯೋಗ

ಏಜೆನ್ಸೀಸ್
Published 3 ಏಪ್ರಿಲ್ 2021, 16:29 IST
Last Updated 3 ಏಪ್ರಿಲ್ 2021, 16:29 IST
ಹಿಮಂತ ಬಿಸ್ವ ಶರ್ಮಾ
ಹಿಮಂತ ಬಿಸ್ವ ಶರ್ಮಾ   

ನವದೆಹಲಿ: ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಅಸ್ಸಾಂನ ಬಿಜೆಪಿ ಮುಖಂಡ ಹಿಮಂತ ಬಿಸ್ವ ಶರ್ಮಾ ಅವರಿಗೆ 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗವು ಶುಕ್ರವಾರ ಆದೇಶಿಸಿತ್ತು.

ಆದೇಶವನ್ನು ಮರುಪರಿಶೀಲಿಸುವಂತೆ ಹಿಮಂತ ಬಿಸ್ವ ಶರ್ಮಾ ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಮರು ಆದೇಶ ನೀಡಿರುವ ಚುನಾವಣಾ ಆಯೋಗವು ಶರ್ಮಾ ಅವರಿಗೆ ಕೇವಲ 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಶನಿವಾರ ಹೇಳಿದೆ.

ಅಸ್ಸಾಂ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಹಿಮಂತ ಬಿಸ್ವ ಶರ್ಮಾ ಅವರು ಬೋಡೊ ಪೀಪಲ್ಸ್ ಫ್ರಂಟ್‌ನ (ಬಿಪಿಎಫ್‌) ಮುಖ್ಯಸ್ಥ ಹಾಗರಾಮ್ ಮೊಹಿಲಾರಿ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ಬಿಪಿಎಫ್‌ನ ಮಿತ್ರ ಪಕ್ಷವಾಗಿರುವ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ADVERTISEMENT

'ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಹಾಗರಾಮ್ ಮೊಹಿಲಾರಿ ಅವರನ್ನು ಜೈಲಿಗೆ ಕಳುಹಿಸುವುದಾಗಿ ಹಿಮಂತ ಬಿಸ್ವ ಶರ್ಮಾ ಸಾರ್ವಜನಿಕವಾಗಿಯೇ ಬೆದರಿಕೆ ಹಾಕಿದ್ದರು' ಎಂದು ಕಾಂಗ್ರೆಸ್‌ ತನ್ನ ದೂರಿನಲ್ಲಿ ಆರೋಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.