ADVERTISEMENT

ಅಸ್ಸಾಂ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ, ಸಿಎಂ ಸೊನೊವಾಲ್ ಮಾಜುಲಿಯಿಂದ ಕಣಕ್ಕೆ

ಪಿಟಿಐ
Published 5 ಮಾರ್ಚ್ 2021, 15:14 IST
Last Updated 5 ಮಾರ್ಚ್ 2021, 15:14 IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಸ್ವಾಗತಿಸಿದ ಸಂದರ್ಭ (ಪಿಟಿಐ ಸಂಗ್ರಹ ಚಿತ್ರ)
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಸ್ವಾಗತಿಸಿದ ಸಂದರ್ಭ (ಪಿಟಿಐ ಸಂಗ್ರಹ ಚಿತ್ರ)   

ನವದೆಹಲಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ. ಇದರಲ್ಲಿ 70 ಮಂದಿಯನ್ನು ಹೆಸರಿಸಲಾಗಿದೆ. 11 ಮಂದಿ ಹಾಲಿ ಶಾಸಕರನ್ನು ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಾಗಿದೆ.

ಅಸ್ಸಾಂ ಗಣ ಪರಿಷದ್ ಹಾಗೂ ಯುನೈಟೆಡ್ ಪೀಪಲ್ಸ್ ಪಕ್ಷದ ಜತೆ ಬಿಜೆಪಿ ಮೈತ್ರಿ ಘೋಷಿಸಿದೆ. ಈ ಎರಡೂ ಪಕ್ಷಗಳು ಕ್ರಮವಾಗಿ 26 ಹಾಗೂ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.

ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ಮಾಜುಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಚಿವ ಹಿಮಂತ್ ಬಿಸ್ವಾ ಶರ್ಮಾ ಜಾಲುಕ್‌ಬಾರಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸೊನೊವಾಲ್ ಮತ್ತು ಹಿಮಂತ್ ಮಾತ್ರವಲ್ಲದೆ, ಅಸ್ಸಾಂ ಗಣ ಪರಿಷದ್ ಹಾಗೂ ಯುನೈಟೆಡ್ ಪೀಪಲ್ಸ್ ನಾಯಕರೂ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

126 ಸದಸ್ಯಬಲದ ಅಸ್ಸಾಂ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ ಮಾರ್ಚ್ 27, ಎರಡನೇ ಹಂತ ಏಪ್ರಿಲ್ 1 ಹಾಗೂ ಮೂರನೇ ಹಂತದ ಮತದಾನ ಏಪ್ರಿಲ್ 6ರಂದು ನಡೆಯಲಿದೆ. ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ 39 ಕ್ಷೇತ್ರಗಳಿಗೆ ಹಾಗೂ ಕೊನೆಯ ಹಂತದಲ್ಲಿ 40 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.