ADVERTISEMENT

ಅಸ್ಸಾಂ ಚುನಾವಣೆ : ₹2.7 ಕೋಟಿ ನಗದು, ₹1.1 ಕೋಟಿ ಮೌಲ್ಯದ ಮದ್ಯ ವಶ

ಪಿಟಿಐ
Published 8 ಮಾರ್ಚ್ 2021, 7:20 IST
Last Updated 8 ಮಾರ್ಚ್ 2021, 7:20 IST
ಅಸ್ಸಾಂನಲ್ಲಿ ಮಾರ್ಚ್‌–ಏಪ್ರಿಲ್‌ನಲ್ಲಿ ನಡೆಯಲಿರುವ ಮೂರು ಹಂತಗಳ ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳಿಗೆ ಚುನಾವಣಾ ಪ್ರಕ್ರಿಯೆಗಳ ಕುರಿತು ತರಬೇತಿ ನೀಡುತ್ತಿರುವುದು.
ಅಸ್ಸಾಂನಲ್ಲಿ ಮಾರ್ಚ್‌–ಏಪ್ರಿಲ್‌ನಲ್ಲಿ ನಡೆಯಲಿರುವ ಮೂರು ಹಂತಗಳ ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳಿಗೆ ಚುನಾವಣಾ ಪ್ರಕ್ರಿಯೆಗಳ ಕುರಿತು ತರಬೇತಿ ನೀಡುತ್ತಿರುವುದು.   

ಗುವಾಹಟಿ: ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾದಾಗಿನಿಂದ ಇಲ್ಲಿವರೆಗೆ ಅಸ್ಸಾಂ ರಾಜ್ಯದಲ್ಲಿ ಒಟ್ಟು ₹2.72 ಕೋಟಿ ದಾಖಲೆರಹಿತ ನಗದು ಮತ್ತು ₹ 1.1 ಕೋಟಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ 23 ದೂರುಗಳನ್ನು ಚುನಾವಣಾ ಆಯೋಗ ಸ್ವೀಕರಿಸಿದೆ. ಮುಕ್ತ ಮತ್ತು ನ್ಯಾಯಸಮ್ಮತಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಎಂಸಿಸಿ ನಿಯಮಗಳ ಉಲ್ಲಂಘನೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು, ಫ್ಲೈಯಿಂಗ್ ಸ್ಕ್ವಾಡ್‌ಗಳು ಮತ್ತು ಸ್ಥಿರ ಕಣ್ಗಾವಲು ತಂಡಗಳು ನಗದು, ಬೆಲೆಬಾಳುವ ವಸ್ತುಗಳು, ಮದ್ಯ ಮತ್ತು ನಿಷೇಧಿತ ವಸ್ತುಗಳ ಸಾಗಿಸುವ ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಸ್ಸಾಂ ವಿಧಾನಸಭೆಯ 126 ಸದಸ್ಯರ ಆಯ್ಕೆಗಾಗಿ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮತದಾನ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.