ADVERTISEMENT

ಅಸ್ಸಾಂ: 24 ಗಂಟೆಗಳಲ್ಲಿ ಈಶಾನ್ಯ ಭಾಗದಲ್ಲಿ ಸಂಭವಿಸಿದ ಐದನೇ ಭೂಕಂಪ

4.2 ತೀವ್ರತೆ

ಪಿಟಿಐ
Published 19 ಜೂನ್ 2021, 5:25 IST
Last Updated 19 ಜೂನ್ 2021, 5:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುವಾಹಟಿ: ‘ಅಸ್ಸಾಂನಲ್ಲಿ ಶನಿವಾರ ಮುಂಜಾನೆ 4.2 ತೀವ್ರತೆಯ ಭೂಕಂಪ ಸಂಭವಿಸಿದೆ.ಇದು ಕಳೆದ 24 ಗಂಟೆಗಳಲ್ಲಿ ಈಶಾನ್ಯ ಭಾಗದಲ್ಲಿ ಸಂಭವಿಸಿದ ಐದನೇ ಭೂಕಂಪವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶುಕ್ರವಾರ ತಡರಾತ್ರಿ ಭೂಕಂಪ ಸಂಭವಿಸಿದ್ದು,ಸೋನಿತ್‌ಪುರ ಜಿಲ್ಲೆಯ ತೇಜಾಪುರದಲ್ಲಿ 30 ಕಿ.ಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಈ ವೇಳೆ ಯಾವುದೇ ಸಾವು–ನೋವು ಸಂಭವಿಸಿಲ್ಲ’ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರವು ಹೇಳಿದೆ.

‘ಶುಕ್ರವಾರವೂ ಎರಡು ಬಾರಿ ಭೂಮಿ ಕಂಪಿಸಿದೆ. ಇದರಲ್ಲಿ ಒಂದು ಭೂಕಂಪನದ ತೀವ್ರತೆಯು 4.1ರಷ್ಟಿತ್ತು. ಈ ಎರಡೂ ಭೂಕಂಪನದ ಕೇಂದ್ರ ಬಿಂದು ಸೋನಿತ್‌ಪುರ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಇದನ್ನು ಹೊರತುಪಡಿಸಿ ಮಣಿಪುರದ ಚಂದೇಲಾ ಜಿಲ್ಲೆಯಲ್ಲೂ ಶುಕ್ರವಾರ ಭೂಮಿ ನಲುಗಿದೆ. ಮೇಘಾಲಯದ ಪಶ್ಚಿಮ ಖಾಸಿ ಹಿಲ್‌ ಜಿಲ್ಲೆಯಲ್ಲಿ 2.6 ತೀವ್ರತೆಯಲ್ಲಿ ಭೂಕಂಪಿಸಿದೆ’ ಎಂದು ಅಧಿಕಾರಿಗಳು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.