ತಿನ್ಸುಕಿಯಾ: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಕಾಕೋಪಾಥರ್‌ನಲ್ಲಿರುವ ಸೇನಾ ನೆಲೆ ಮೇಲೆ ಉಗ್ರರ ದಾಳಿ ನಡೆಸಿದ್ದು, ಮೂವರು ಸೈನಿಕರು ಗಾಯಗೊಂಡಿದ್ದಾರೆ.
ಗುರುವಾರ ಮಧ್ಯರಾತ್ರಿ 12.30ರ ಸುಮಾರಿಗೆ ಚಲಿಸುತ್ತಿದ್ದ ವಾಹನದಲ್ಲಿದ್ದ ಉಗ್ರರು, ಸೇನಾ ನೆಲೆ ಮೇಲೆ ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾರೆ. ತಕ್ಷಣವೇ ಕಾರ್ಯನಿರತರಾದ ಸೈನಿಕರು ನಾಗರಿಕರ ಮನೆಗಳ ಮೇಲೆ ದಾಳಿ ನಡೆಯುವುದನ್ನು ತಪ್ಪಿಸಿದರು ಎಂದು ಸೇನಾ ವಕ್ತಾರರು ತಿಳಿಸಿದರು.
ಮೂವರು ಸೈನಿಕರಿಗೆ ಸಣ್ಣ ಗಾಯಗಳಾಗಿರುವುದನ್ನು ಹೊರತುಪಡಿಸಿ, ಬೇರೆ ಯಾವುದೇ ಹಾನಿಯಗಿಲ್ಲ. ಉಗ್ರರನ್ನು ಬಂಧಿಸಲು ಸೇನೆ ಮತ್ತು ಪೊಲೀಸರು ಜಂಟಿ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.