
ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ದೇಶ ಕಂಡ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಶುಕ್ರವಾರ ಆರೋಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಖೇರಾ, 'ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ತಮ್ಮನ್ನು ಸೋಲಿಸಲಿದ್ದಾರೆ ಎಂಬುದು ಹಿಮಂತಗೆ ಚೆನ್ನಾಗಿ ಗೊತ್ತಿದೆ. ಆದಾಗ್ಯೂ, ಅವರು ತಮ್ಮನ್ನು ವಿರೋಧಿಸುವವರನ್ನು ಬಂಧಿಸಲು ಪೊಲೀಸರ ನೆರವು ಮತ್ತು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ನಿರ್ದೇಶಿಸಿರುವ ಚುನಾವಣಾ ಆಯೋಗದ ಸಹಕಾರ ಪಡೆಯುತ್ತಿದ್ದಾರೆ' ಎಂದು ದೂರಿದ್ದಾರೆ.
'ಹೊರಗಿನ ಮತದಾರರನ್ನು ರಾಜ್ಯಕ್ಕೆ ಕರೆತರಲು ಹಾಗೂ ಅವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ಎಸ್‌ಐಆರ್ ನಡೆಸಲಾಗುತ್ತಿದೆ' ಎಂದು ಗಂಭೀರ ಆರೋಪ ಮಾಡಿದ್ದಾರೆ.
'ಅಸ್ಸಾಂ ಜನರು ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಚುನಾವಣೆಯಲ್ಲಿ ನಿರ್ಣಾಯಕ ಉತ್ತರ ನೀಡಲಿದ್ದಾರೆ' ಎಂದು ಎಚ್ಚರಿಸಿರುವ ಕಾಂಗ್ರೆಸ್ ನಾಯಕ, 'ಒಂದು ವೇಳೆ, ಹಿಮಂತ ಅಧಿಕಾರ ಕಳೆದುಕೊಂಡರೆ, ಹೊರಗೆ ಬದುಕಲು ಸಾಧ್ಯವಿಲ್ಲ. ಅವರಿಗೆ ಸೂಕ್ತ ಸ್ಥಳವಾದ ಜೈಲಿಗೆ ಕಳುಹಿಸಲಾಗುತ್ತದೆ' ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.