ADVERTISEMENT

ಪತ್ನಿಯ ಮೇಲೆ ಹಲ್ಲೆ ಮಾಡಿ ವಿದೇಶಕ್ಕೆ ಪರಾರಿಯಾದ ನವವಿವಾಹಿತ:Blue corner ನೋಟಿಸ್

ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನವವಿವಾಹಿತ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿ, ಗಾಯಗೊಳಿಸಿ ವಿದೇಶಕ್ಕೆ ಪರಾರಿಯಾಗಿರುವ ಘಟನೆ ನಡೆದಿದೆ.

ಪಿಟಿಐ
Published 17 ಮೇ 2024, 8:03 IST
Last Updated 17 ಮೇ 2024, 8:03 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಸಾಂದರ್ಭಿಕ ಚಿತ್ರ

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನವವಿವಾಹಿತ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿ, ಗಾಯಗೊಳಿಸಿ ವಿದೇಶಕ್ಕೆ ಪರಾರಿಯಾಗಿರುವ ಘಟನೆ ನಡೆದಿದೆ.

ADVERTISEMENT

ಇದೀಗ ಈ ವ್ಯಕ್ತಿಯ ವಿರುದ್ಧ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಜರ್ಮನಿಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಏನು?

ಕೋಯಿಕ್ಕೋಡ್ ಜಿಲ್ಲೆಯಲ್ಲಿ ಯುವತಿಯೊಬ್ಬರ ಜೊತೆ ರಾಹುಲ್ ಪಿ. ಗೋಪಾಲ್ ಎನ್ನುವರು ಮೇ 5ರಂದು ವಿವಾಹವಾಗಿದ್ದರು. ಆದರೆ, ವರದಕ್ಷಿಣೆ ವಿಷಯವಾಗಿ ಮದುವೆಯಾದ ಕೆಲವೇ ದಿನಗಳ ಬಳಿಕ ಪತ್ನಿ ಜೊತೆ ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ಹೋಗಿ ಪತ್ನಿಯನ್ನು ಸಾಯಿಸುವ ಉದ್ದೇಶದಿಂದ ಹಲ್ಲೆ ಮಾಡಿದ್ದಾರೆ. ಅವರ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪಂತಿರನಕಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವರದಿ ಕೇಳಿ ಕೇರಳ ಮಹಿಳಾ ಆಯೋಗ ಕೂಡ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.