ADVERTISEMENT

ದೆಹಲಿ ವಿಧಾನಸಭೆ ಚುನಾವಣೆ: ಮತದಾನ ಆರಂಭ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 3:12 IST
Last Updated 8 ಫೆಬ್ರುವರಿ 2020, 3:12 IST
   

ನವದೆಹಲಿ:ದೆಹಲಿ ವಿಧಾನಸಭೆಯ ಒಟ್ಟು 70 ಸ್ಥಾನಗಳಿಗೆ ಇಂದು ಬೆಳಗ್ಗೆ 8ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆ ವರೆಗೆ ಮುಂದುವರಿಯಲಿದೆ.

ದೆಹಲಿಯಲ್ಲಿಒಟ್ಟು 1,47,86,382ಮತದಾರರಿದ್ದು, 2,689 ಕೇಂದ್ರಗಳ13,750 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ 516 ಕೇಂದ್ರ ಹಾಗೂ 3,704 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಒಟ್ಟು 672 ಅಭ್ಯರ್ಥಿಗಳು ಕಣದಲ್ಲಿದ್ದು, ಆಡಳಿತ ಪಕ್ಷ ಎಎಪಿ ಮತ್ತು ಬಿಜೆಪಿ, ಕಾಂಗ್ರೆಸ್‌ನಡುವೆ ಪೈಪೋಟಿ ಇದೆ.

ಭದ್ರತೆಗಾಗಿ40,000 ರಕ್ಷಣಾ ಸಿಬ್ಬಂದಿ,19,000 ಗೃಹ ರಕ್ಷಣಾ ದಳ ಸಿಬ್ಬಂದಿ, ಕೇಂದ್ರ ಸಶಸ್ತ್ರ ಮೀಸಲು ಪಡೆಯ 190 ಪಡೆಗಳನ್ನು ನಿಯೋಜಿಸಲಾಗಿದೆ.

ಕಳೆದ ಚುನಾವಣೆಯಲ್ಲಿ67 ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೇರಿದ್ದ ಅರವಿಂದ ಕೇಜ್ರಿವಾಲ್‌ ನೇತೃತ್ವದ ಎಎಪಿ ಈ ಬಾರಿ ಕೆಲವು ಕ್ಷೇತ್ರಗಳನ್ನು ಕಳೆದುಕೊಳ್ಳಬಹುದಾದರೂ ಮತ್ತೆ ಅಧಿಕಾರಕ್ಕೇರುವುದು ಖಚಿತ ಎಂದು ಸಮೀಕ್ಷೆಗಳು ಹೇಳಿವೆ.

ಮತ ಎಣಿಕೆ: ಫೆಬ್ರುವರಿ 11

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.