ಇಂಫಾಲ: ಹೀಂಗಾಂಗ್ ಕ್ಷೇತ್ರದಿಂದ ಸ್ಪರ್ಧಿಸಿರುವ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 18,271 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
60 ವಿಧಾನಸಭಾ ಕ್ಷೇತ್ರಗಳಿರುವ ಮಣಿಪುರದಲ್ಲಿ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಈಗಿನ ಮಾಹಿತಿ ಪ್ರಕಾರ, ಬಿಜೆಪಿಯು 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿದೆ.
2017ರ ವಿಧಾನಸಭಾ ಚುನಾವಣೆ ಫಲಿತಾಂಶ
ಮಣಿಪುರದ 60 ವಿಧಾನಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಬಿಜೆಪಿ 21, ನಾಗಾ ಪೀಪಲ್ಸ್ ಫ್ರಂಟ್ 04 ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ 04 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.