ADVERTISEMENT

ಮಣಿಪುರದಲ್ಲಿ ಬಿಜೆಪಿಗೆ ಮುನ್ನಡೆ, ಮುಖ್ಯಮಂತ್ರಿ ಬಿರೇನ್ ಸಿಂಗ್ ಜಯದ ಸನಿಹ

ಪಿಟಿಐ
Published 10 ಮಾರ್ಚ್ 2022, 9:07 IST
Last Updated 10 ಮಾರ್ಚ್ 2022, 9:07 IST
ಮಣಿಪುರದಲ್ಲಿ ಬಿಜೆಪಿ ಮುನ್ನಡೆ, ಸಿಎಂ ಬಿರೇನ್ ಸಿಂಗ್ ಜಯದ ಸನಿಹ
ಮಣಿಪುರದಲ್ಲಿ ಬಿಜೆಪಿ ಮುನ್ನಡೆ, ಸಿಎಂ ಬಿರೇನ್ ಸಿಂಗ್ ಜಯದ ಸನಿಹ   

ಇಂಫಾಲ: ಮಣಿಪುರ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮುಖ್ಯಮಂತ್ರಿ ಬಿರೇನ್ ಸಿಂಗ್ ಕೂಡ 16 ಸಾವಿರ ಮತಗಳ ಅಂತರದಿಂದ ಮುಂದಿದ್ದಾರೆ.

ಹೀಂಗಾಂಗ್‌ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿಯ ಬಿರೇನ್ ಸಿಂಗ್, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 16,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ತಿಳಿಸಿದೆ.

ನ್ಯಾಷನಲ್ ಪೀಪಲ್ ಪಾರ್ಟಿ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ನಾಗಾ ಪೀಪಲ್ಸ್ ಫ್ರಂಟ್ ಐದು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ), ಕುಕಿ ಪೀಪಲ್ಸ್ ಅಲಯನ್ಸ್ ಮತ್ತು ಸ್ವತಂತ್ರ ಅಭ್ಯರ್ಥಿಗಳು ತಲಾ ಒಂದು ಕ್ಷೇತ್ರದಲ್ಲಿ ಮುಂದಿದ್ದಾರೆ.

ADVERTISEMENT

60 ವಿಧಾನಸಭಾ ಕ್ಷೇತ್ರಗಳಿರುವ ಮಣಿಪುರದಲ್ಲಿ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಮಧ್ಯಾಹ್ನ 2 ಗಂಟೆ ವೇಳೆಗೆ 41 ಕ್ಷೇತ್ರಗಳಲ್ಲಿನ ಟ್ರೆಂಡ್ ಬಗ್ಗೆ ತಿಳಿದುಬಂದಿದೆ.

2017ರ ವಿಧಾನಸಭಾ ಚುನಾವಣೆ ಫಲಿತಾಂಶ

ಮಣಿಪುರದ 60 ವಿಧಾನಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಬಿಜೆಪಿ 21, ನಾಗಾ ಪೀಪಲ್ಸ್‌ ಫ್ರಂಟ್‌ 04 ಮತ್ತು ನ್ಯಾಷನಲ್‌ ಪೀಪಲ್ಸ್‌ ಪಾರ್ಟಿ 04 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.