ADVERTISEMENT

ಪಂಚ ರಾಜ್ಯಗಳ ಮತ ಎಣಿಕೆ: ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಐಎಎನ್ಎಸ್
Published 10 ಮಾರ್ಚ್ 2022, 9:13 IST
Last Updated 10 ಮಾರ್ಚ್ 2022, 9:13 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಪಂಚ ರಾಜ್ಯಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸುತ್ತಿದ್ದು, ವಿದ್ಯುನ್ಮಾನ ಮತಯಂತ್ರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಪಕ್ಷದ ಕಚೇರಿ ಮುಂದೆ ಪ್ರತಿಭಟನೆ ಕೈಗೊಂಡಿದ್ದಾರೆ.

ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸುತ್ತಿದೆ.

ಚಮ್‌ಕೌರ್‌ ಸಾಹಿಬ್‌ ಹಾಗೂ ಭದೌರ್‌ ವಿಧಾನಸಭೆ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ಉಭಯ ಕ್ಷೇತ್ರಗಳಲ್ಲೂ ಹಿನ್ನಡೆ ಅನುಭವಿಸಿದ್ದಾರೆ. ಭದೌರ್ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಲಾಭ್ ಸಿಂಗ್ ಉಗೋಕೆ ಚನ್ನಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ADVERTISEMENT

ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಕೂಡ ಪೂರ್ವ ಅಮೃತಸರ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ದಾರೆ.

ಇತ್ತೀಚಿನ ಟ್ರೆಂಡ್ ಪ್ರಕಾರ, 117 ವಿಧಾನಸಭಾ ಕ್ಷೇತ್ರಗಳಿರುವ ಪಂಜಾಬ್‌ನಲ್ಲಿ ಎಎಪಿ ಬಹುಮತ ಪಡೆಯುವತ್ತ ಸಾಗಿದೆ. ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಆಮ್ ಆದ್ಮಿ ಪಕ್ಷ 90 ಕ್ಷೇತ್ರಗಳಲ್ಲಿ ಮುಂದಿದೆ.

ಉತ್ತರ ಪ್ರದೇಶದಲ್ಲಿ 250 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಸಮಾಜವಾದಿ ಪಕ್ಷ 112 ಕ್ಷೇತ್ರಗಳಲ್ಲಿ ಮುಂದಿದೆ. ಕಾಂಗ್ರೆಸ್ 2 ಕ್ಷೇತ್ರ ಮತ್ತು ಬಿಎಸ್‌ಪಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.