ADVERTISEMENT

ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಜಯ: ಯೋಗಿ ಆದಿತ್ಯನಾಥ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮಾರ್ಚ್ 2022, 15:45 IST
Last Updated 10 ಮಾರ್ಚ್ 2022, 15:45 IST
ಯೋಗಿ ಆದಿತ್ಯನಾಥ್‌ – ಪ್ರಧಾನಿ ಮೋದಿ
ಯೋಗಿ ಆದಿತ್ಯನಾಥ್‌ – ಪ್ರಧಾನಿ ಮೋದಿ   

ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ.

ಆ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಯೋಗಿ ಆದಿತ್ಯನಾಥ್‌ ಅವರು ಪ್ರಧಾನಿ ಮೋದಿಯನ್ನು ಹೊಗಳಿದ್ದಾರೆ.

‘ಉತ್ತಮ ಆಡಳಿತ, ಭದ್ರತೆ ಮತ್ತು ರಾಷ್ಟ್ರೀಯತೆಗೆ ಈ ಗೆಲುವು ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು ಖಚಿತವಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

‘ಈ ಬಹುಮತವು, ಪ್ರಧಾನಿ ಮೋದಿಯವರ ನೀತಿಗಳ ಮೇಲೆ ಸಾಮಾನ್ಯ ಜನರ ಅಚಲ ನಂಬಿಕೆಯ ಮುದ್ರೆಯಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮೈತ್ರಿಕೂಟ 221 ಸ್ಥಾನಗಳನ್ನು ಗೆದ್ದು, 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.