ADVERTISEMENT

ನಕಾರಾತ್ಮಕ ಪ್ರವೃತ್ತಿ ಬಿಟ್ಟು ಸೋಲಿನಿಂದ ಪಾಠ ಕಲಿಯಿರಿ: ವಿಪಕ್ಷಗಳಿಗೆ ಮೋದಿ ಸಲಹೆ

ಒಳ್ಳೆಯ ಆಡಳಿತವಿದ್ದಾಗ ‘ಆಡಳಿತ ವಿರೋಧಿ’ ಪದವು ಅಪ್ರಸ್ತುತವಾಗುತ್ತದೆ ಎಂದ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2023, 6:51 IST
Last Updated 4 ಡಿಸೆಂಬರ್ 2023, 6:51 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು</p></div>

ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು

   

–ಪಿಟಿಐ ಚಿತ್ರ

ನವದೆಹಲಿ: ಯಾವುದೇ ರಾಜ್ಯದಲ್ಲಿ ಸರ್ಕಾರ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾಗ ‘ಆಡಳಿತ ವಿರೋಧಿ’ ಪದವು ಅಪ್ರಸ್ತುತವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ADVERTISEMENT

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಈಗಾಗಲೇ ಹೊರಬಿದ್ದಿದೆ. ಚುನಾವಣಾ ಫಲಿತಾಂಶವು ದೇಶದ ಜನರ ಕಲ್ಯಾಣಕ್ಕಾಗಿ ಬದ್ಧರಾಗಿರುವವರಿಗೆ ಹೆಚ್ಚು ಉತ್ತೇಜನಕಾರಿಯಾಗಿದೆ’ ಎಂದು ಅವರು ಹೇಳಿದ್ದಾರೆ.

‘ವಿರೋಧ ಪಕ್ಷದಲ್ಲಿ ಕುಳಿತಿರುವ ನಮ್ಮ ಸಹೋದ್ಯೋಗಿಗಳಿಗೆ (ವಿಪಕ್ಷ ನಾಯಕರಿಗೆ) ಇದೊಂದು ಸುವರ್ಣಾವಕಾಶ. ಈ ಬಾರಿಯ ಅಧಿವೇಶನದಲ್ಲಿ ಚುನಾವಣಾ ಸೋಲಿನ ಹತಾಶೆಯನ್ನು ಹೊರ ಬನ್ನಿ, ಸೋಲನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ಮುನ್ನಡೆಯಿರಿ’ ಎಂದು ಸಲಹೆ ನೀಡುತ್ತೇನೆ’ ಎಂದು ಮೋದಿ ಹೇಳಿದ್ದಾರೆ.

ಕಳೆದ 9 ವರ್ಷಗಳಿಂದ ತೋರಿದ ನಕಾರಾತ್ಮಕ ಪ್ರವೃತ್ತಿಯನ್ನು ಬಿಟ್ಟುಬಿಡಿ. ಸೋಲಿನಿಂದ ಪಾಠಯನ್ನು ಕಲಿಯಿರಿ ಎಂದು ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಮತದಾರರು ನಕಾರಾತ್ಮಕತೆಯನ್ನು ತಿರಸ್ಕರಿಸಿದ್ದಾರೆ. ಅಧಿವೇಶನ ಆರಂಭಕ್ಕೂ ಮುನ್ನ ನಾವು ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ್ದೇವೆ. ಕಲಾಪ ಸುಗಮವಾಗಿ ನಡೆಯಲು ಸಹಕಾರ ನೀಡುವಂತೆಯೂ ಒತ್ತಾಯಿಸಿದ್ದೇವೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.