ADVERTISEMENT

ಛತ್ತೀಸ್‌ಗಡ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಗೆಲ್ಲಲಿದೆ: ಗಡ್ಕರಿ ವಿಶ್ವಾಸ

ವಿಧಾನಸಭೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2018, 6:38 IST
Last Updated 5 ಡಿಸೆಂಬರ್ 2018, 6:38 IST
ನಿತಿನ್‌ ಗಡ್ಕರಿ
ನಿತಿನ್‌ ಗಡ್ಕರಿ   

ನವದೆಹಲಿ:ಛತ್ತೀಸ್‌ಗಡ, ಮಧ್ಯಪ್ರದೇಶ, ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಕೇಂದ್ರಸಾರಿಗೆ ಸಚಿವ ನಿತಿನ್‌ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಛತ್ತೀಸ್‌ಗಡ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಮೂರೂ ರಾಜ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎನ್ನುವ ವಿಶ್ವಾಸವಿದೆ’ ಎಂದು ಹೇಳಿದರು.

ಡಿಸೆಂಬರ್‌ 07ರಂದು ತೆಲಂಗಾಣ ಹಾಗು ರಾಜಸ್ಥಾನ ವಿಧಾನಸಭೆ ಚುನಾವಣೆ ನಡೆಯಲಿದ್ದು, ಛತ್ತೀಸ್‌ಗಡ, ಮಧ್ಯಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ನವೆಂಬರ್‌ನಲ್ಲಿ ನಡೆದಿವೆ. ಆದರೆ ಐದೂ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್‌ 11ರಂದು ಪ್ರಕಟಗೊಳ್ಳುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.