ADVERTISEMENT

Assembly Elections: ಗೋವಾದಲ್ಲಿ ಶೇ 11.04, ಉತ್ತರಾಖಂಡದಲ್ಲಿ ಶೇ 5.15 ಮತದಾನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಫೆಬ್ರುವರಿ 2022, 6:49 IST
Last Updated 14 ಫೆಬ್ರುವರಿ 2022, 6:49 IST
ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮತದಾನಕ್ಕಾಗಿ ಸಾಲಿನಲ್ಲಿ ನಿಂತಿರುವ ಜನ – ಪಿಟಿಐ ಚಿತ್ರ
ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮತದಾನಕ್ಕಾಗಿ ಸಾಲಿನಲ್ಲಿ ನಿಂತಿರುವ ಜನ – ಪಿಟಿಐ ಚಿತ್ರ   

ನವದೆಹಲಿ: ಉತ್ತರಾಖಂಡ ಮತ್ತು ಗೋವಾದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು ಇಂದು (ಸೋಮವಾರ) ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಉತ್ತರ ಪ್ರದೇಶದಲ್ಲಿ 55 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ.

ಗೋವಾದಲ್ಲಿ ಮೊದಲ ಎರಡು ಗಂಟೆಗಳ ಅವಧಿಯಲ್ಲಿ ಶೇ 11.04ರಷ್ಟು ಮತದಾನವಾಗಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಕ್ಷೇತ್ರ ಸಂಕೆಲಿಮ್‌ನಲ್ಲಿ ಅತಿಹೆಚ್ಚು, ಅಂದರೆ ಶೇ 14.32ರಷ್ಟು ಮತ ಚಲಾವಣೆಯಾಗಿದೆ. ದಕ್ಷಿಣ ಗೋವಾದಲ್ಲಿ ಶೇ 5.6ರಷ್ಟು ಮತದಾನವಾಗಿದೆ.

ಕೋತಂಬಿ ಗ್ರಾಮದ ಮತಗಟ್ಟೆಯಲ್ಲಿ ಮತ ಚಲಾಯಿಸಿ ಮಾತನಾಡಿದ ಸಾವಂತ್, ಸ್ಥಿರ ಸರ್ಕಾರಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜನರಿಗೆ ಮನವಿ ಮಾಡಿದರು.

ADVERTISEMENT

ಉತ್ತರಾಖಂಡದಲ್ಲಿ ಮೊದಲ 2 ಗಂಟೆ ಅವಧಿಯಲ್ಲಿ ಶೇ 5.15ರಷ್ಟು ಮತದಾನವಾಗಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಾಜ್ಯಪಾಲ ಗುರ್ಮಿತ್ ಸಿಂಗ್, ಸಚಿವ ಸತ್‌ಪಾಲ್ ಮಹಾರಾಜ್ ಸೇರಿದಂತೆ ಅನೇಕ ರಾಜಕೀಯ ಮುಖಂಡರೂ ಮತ ಚಲಾಯಿಸಿದ್ದಾರೆ.

ಉತ್ತರ ಪ್ರದೇಶದ 55 ಕ್ಷೇತ್ರಗಳಲ್ಲಿ ಬೆಳಿಗ್ಗೆ 11 ಗಂಟೆ ವೇಳೆಗೆ ಶೇ 23.03ರಷ್ಟು ಮತದಾನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.