ADVERTISEMENT

ಐದು ರಾಜ್ಯಗಳಲ್ಲಿ ಸೋಲು: ದೆಹಲಿಯಲ್ಲಿ ಕಾಂಗ್ರೆಸ್‌ನ ಭಿನ್ನಮತೀಯ ನಾಯಕರ ಸಭೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮಾರ್ಚ್ 2022, 14:38 IST
Last Updated 11 ಮಾರ್ಚ್ 2022, 14:38 IST
ಕಪಿಲ್ ಸಿಬಲ್ ಮತ್ತು ಗುಲಾಂ ನಬಿ ಆಜಾದ್‌
ಕಪಿಲ್ ಸಿಬಲ್ ಮತ್ತು ಗುಲಾಂ ನಬಿ ಆಜಾದ್‌   

ನವದೆಹಲಿ: ಐದು ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಹೀನಾಯವಾಗಿ ಸೋಲು ಕಂಡಿದೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಕೆಲ ರಾಷ್ಟ್ರೀಯ ಮುಖಂಡರು ತಮ್ಮ ಪಕ್ಷದ ನಾಯಕತ್ವದ ವಿರುದ್ಧ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಭಿನ್ನಮತೀಯ ನಾಯಕರೆಂದು ಗುರುತಿಸಲ್ಪಟ್ಟಿರುವ ಕಪಿಲ್ ಸಿಬಲ್, ಮನೀಶ್ ತಿವಾರಿ ಅವರು ದೆಹಲಿಯಲ್ಲಿರುವ ಗುಲಾಂ ನಬಿ ಆಜಾದ್‌ ಮನೆಗೆ ಶುಕ್ರವಾರ ಸಂಜೆ ಭೇಟಿ ನೀಡಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಕಾಂಗ್ರೆಸ್‌ನ ನಾಯಕತ್ವದ ಬದಲಾವಣೆ ಕುರಿತು ಸಂಸದ ಶಶಿ ತರೂರ್‌ ಅವರು ಗುರುವಾರ ಸಂಜೆ ಪ್ರಸ್ತಾಪಿಸಿದ್ದಾರೆ.

ADVERTISEMENT

ಉತ್ತರಾಖಂಡ, ಗೋವಾ, ಮಣಿಪುರ, ಪಂಜಾಬ್‌ ಹಾಗೂ ಉತ್ತರ ಪ್ರದೇಶಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.