ADVERTISEMENT

ಜಮ್ಮು–ಕಾಶ್ಮೀರ: ವರ್ಷಾಂತಕ್ಕೆ ವಿಧಾನಸಭಾ ಚುನಾವಣೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 16:47 IST
Last Updated 12 ಫೆಬ್ರುವರಿ 2021, 16:47 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕ್ಷೇತ್ರಗಳ ವಿಂಗಡಣಾ ಕಾರ್ಯ ಕೆಲವೇ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ವಿಧಾನಸಭಾ ಚುನಾವಣೆಈ ವರ್ಷಾಂತ್ಯಕ್ಕೆ ನಡೆಯುವ ಸಾಧ್ಯತೆ ಇದೆ.

‘ಕ್ಷೇತ್ರಗಳ ವಿಂಗಡಣೆಗಾಗಿ ರಚಿಸಲಾಗಿರುವ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾಪ್ರಕಾಶ್‌ ದೇಸಾಯಿ ನೇತೃತ್ವದ ಆಯೋಗವು ತನ್ನ ವರದಿಯನ್ನು ಕೆಲವೇ ತಿಂಗಳಲ್ಲಿ ಸಲ್ಲಿಸಲಿದೆ. ನಂತರ ಚುನಾವಣಾ ಆಯೋಗವು ಚುನಾವಣೆ ನಡೆಯುವ ದಿನಾಂಕ ಘೋಷಿಸುವುದು’ ಎಂದು ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಕಣಿವೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ, ಜಮ್ಮು–ಕಾಶ್ಮೀರ ಹಾಗೂ ಲಡಾಖ್ ಎಂಬ ಕೇಂದ್ರಾಡಳಿತ ಪ್ರದೇಶಗಳನ್ನು ರಚಿಸಲಾಯಿತು. ಈ ಪೈಕಿ, ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರದಲ್ಲಿ ಮಾತ್ರ ವಿಧಾನಸಭಾ ಕ್ಷೇತ್ರಗಳನ್ನು ಉಳಿಸಿಕೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.