ಜಮ್ಮು (ಪಿಟಿಐ): ಕ್ಷೇತ್ರಗಳ ಪುನರ್ ವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ ವರ್ಷದ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರವೀಂದರ್ ರೈನ ಶನಿವಾರ ಹೇಳಿದ್ದಾರೆ.
ಭಾರತೀಯ ಜನಸಂಘದ ನಾಯಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರಿಗೆ ಗೌರವ ಸಲ್ಲಿಸಲು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ರೈನಾ ಮಾತನಾಡಿ, ಕ್ಷೇತ್ರಗಳ ವಿಂಗಡಣೆ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು ವರ್ಷಾಂತ್ಯದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.