ನರೇಂದ್ರ ಮೋದಿ
ಪಿಟಿಐ ಚಿತ್ರ
ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಕ್ಸಿಯಂ -4 ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದು, ಗಗನಯಾನಿ ಶುಭಾಂಶು ಶುಕ್ಲಾ 140 ಕೋಟಿ ಭಾರತೀಯರ ಆಶಯಗಳು, ಆಕಾಂಕ್ಷೆಗಳು ಮತ್ತು ಭರವಸೆಗಳನ್ನು ಹೊತ್ತು ತೆರಳಿದ್ದಾರೆ ಎಂದು ಹೇಳಿದ್ದಾರೆ.
ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕದ ಗಗನಯಾನಿಗಳನ್ನು ಹೊತ್ತ ಬಾಹ್ಯಾಕಾಶ ಮಿಷನ್‌ನ ಯಶಸ್ವಿ ಉಡಾವಣೆಯನ್ನು ನಾವು ಸ್ವಾಗತಿಸುತ್ತೇವೆ ಎಂದು ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಗ್ರೂಪ್ ಕ್ಯಾಪ್ಟನ್ ಶುಕ್ಲಾ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳುತ್ತಿರುವ ಮೊದಲ ಭಾರತೀಯರಾಗುವ ಹಾದಿಯಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
‘ಶುಕ್ಲಾ ಅವರು 1.4 ಶತಕೋಟಿ ಭಾರತೀಯರ ಆಶಯಗಳು, ಭರವಸೆಗಳು ಮತ್ತು ಆಕಾಂಕ್ಷೆಗಳನ್ನು ಹೊತ್ತು ಸಾಗಿದ್ದಾರೆ. ಅವರು ಮತ್ತು ಇತರ ಗಗನಯಾತ್ರಿಗಳಿಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ’ ಎಂದು ಮೋದಿ ಹಾರೈಸಿದ್ದಾರೆ.
ಆಕ್ಸಿಯಂ-4 ಮಿಷನ್‌ನ ಬಾಹ್ಯಾಕಾಂಶ ನೌಕೆಯು ಮಧ್ಯಾಹ್ನ 12:01ಕ್ಕೆ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಯಿತು.
ಗಗನಯಾತ್ರಿಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 14 ದಿನಗಳ ಕಾಲ 60ಕ್ಕೂ ಹೆಚ್ಚು ವಿಜ್ಞಾನ ಪ್ರಯೋಗಗಳನ್ನು ನಡೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.