ಪಟ್ನಾ: ಬಿಹಾರದ ವೈಶಾಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಅಲ್ಲದೆ ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ನಿಧಿಯನ್ನು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಘೋಷಿಸಲಾಗಿದೆ.
ರಾಜಧಾನಿ ಪಟ್ನಾದಿಂದ 30 ಕಿ.ಮೀ. ದೂರದಲ್ಲಿ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಅಪಘಾತ ನಡೆದಿದೆ. ವೇಗವಾಗಿ ಬಂದ ಟ್ರಕ್, ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರ ಮೇಲೆ ಹರಿದು ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ.
ಮೃತರಲ್ಲಿ ಮೂವರು ಮಕ್ಕಳು ಹಾಗೂ ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.