ಹೈದರಾಬಾದ್: ಇಲ್ಲಿನ ಕಚೆಗುಡಾ ರೈಲು ನಿಲ್ದಾಣದ ಬಳಿ ಇಂದು ಬೆಳಗ್ಗೆ ಎರಡು ರೈಲುಗಳು ಡಿಕ್ಕಿ ಹೊಡೆದದ್ದರ ಪರಿಣಾಮ ಕನಿಷ್ಟ 25 ಪ್ರಯಾಣಿಕರು ಗಾಯಗೊಂಡಿದ್ದಾರೆ.
ದಕ್ಷಿಣ ವಲಯದ ರೈಲ್ವೆ ಅಧಿಕಾರಿಗಳ ಪ್ರಕಾರ, ನಿಲ್ದಾಣದಲ್ಲಿ ನಿಂತಿದ್ದ ಕೊಂಗು ಎಕ್ಸಪ್ರೆಸ್ ರೈಲಿಗೆ ಎಮ್‌ಎಮ್‌ಟಿಎಸ್ ರೈಲು ಡಿಕ್ಕಿ ಹೊಡೆದಿದೆ. ಸಿಗ್ನಲ್ ವ್ಯವಸ್ಥೆಯಲ್ಲಿ ಕಾಣಿಸಿಕೊಂಡ ದೋಷವೇ ಈ ಅಪಘಾತಕ್ಕೆ ಕಾರಣವಾಗಿದೆ. 4ನೇ ಪ್ಲಾಟ್‌ಪಾರ್ಮ್‌ನಿಂದ ಹೊರಡಬೇಕಿದ್ದ ಎಮ್‌ಎಮ್‌ಟಿಸಿ ರೈಲಿಗೆ 2ನೇ ಪ್ಲಾಟ್‌ಪಾರ್ಮ್‌ನಲ್ಲಿ ಹಸಿರು ಸಿಗ್ನಲ್ ಸಿಕ್ಕಿದ್ದರ ಪರಿಣಾಮ ಈ ಅವಘಡ ಜರುಗಿದೆ.
ಈ ಮಾರ್ಗದಲ್ಲಿ ಚಲಿಸುವ ಎಲ್ಲ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಈ ಘಟನೆಯ ತನಿಖೆಯನ್ನು ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.