ಬಕ್ಸರ್(ಬಿಹಾರ): ದೆಹಲಿ–ಕಾಮಾಕ್ಯ ನಾರ್ತ್ ಈಸ್ಟ್ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು, ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣ ಬಳಿ ಬುಧವಾರ ಹಳಿ ತಪ್ಪಿದ್ದು, ಅವಘಡದಲ್ಲಿ ಆರು ಜನರು ಮೃತಪಟ್ಟಿದ್ಧಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾತ್ರಿ 9.35ರ ವೇಳೆಗೆ ಘಟನೆ ಸಂಭವಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಸ್ಥಳಕ್ಕೆ ಆಂಬುಲೆನ್ಸ್ ಧಾವಿಸಿದ್ದು, ಪರಿಹಾರ ಕಾರ್ಯ ನಡೆದಿದೆ. ಸ್ಥಳದಿಂದ ಪ್ರಯಾಣಿಕರನ್ನು ಕರೆದೊಯ್ಯುವ ಸಲುವಾಗಿ ಪಟ್ನಾದಿಂದ ‘ಸ್ಕ್ರ್ಯಾಚ್ ರೇಕ್’ ತರಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.