ADVERTISEMENT

ತೆಲಂಗಾಣ: ಭಾರೀ ಮಳೆ– ಪ್ರವಾಹದಲ್ಲಿ ಕೊಚ್ಚಿಹೋದ 8 ಮಂದಿ

ಪಿಟಿಐ
Published 28 ಜುಲೈ 2023, 14:54 IST
Last Updated 28 ಜುಲೈ 2023, 14:54 IST
   

ಹೈದರಾಬಾದ್: ಭಾರೀ ಮಳೆಯ ಹಿನ್ನೆಲೆಯಲ್ಲಿ ತೆಲಂಗಾಣದ ಮುಲುಗು ಜಿಲ್ಲೆಯ ನದಿಯ ಪ್ರವಾಹದಲ್ಲಿ ಎಂಟು ಜನರು ಕೊಚ್ಚಿಹೋಗಿದ್ದು, ಅವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಜಿಲ್ಲೆಯ ದೂರದ ಹಳ್ಳಿಯೊಂದರ ಹನ್ನೆರಡು ಜನರು ಪ್ರವಾಹದ ಹಿನ್ನೆಲೆಯಲ್ಲಿ ಗುರುವಾರ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾಗ ನೀರಿನಲ್ಲಿ ಕೊಚ್ಚಿಹೋಗಿದ್ದರು. ಆದರೆ. ಅವರಲ್ಲಿ ನಾಲ್ವರು ಈಜಿ ದಡ ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಾಪತ್ತೆಯಾಗಿದ್ದ ಎಂಟು ಮಂದಿಯ ಶವಗಳು ಇಂದು ಪತ್ತೆಯಾಗಿವೆ. ತೆಲಂಗಾಣದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ರಸ್ತೆ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.

ADVERTISEMENT

ಜುಲೈ 22ರಿಂದ ವಿವಿಧ ಮಳೆ ಸಂಬಂಧಿತ ಅವಘಡಗಳಲ್ಲಿ ಎಂಟು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.