ADVERTISEMENT

2030ರ ವರೆಗೆ ಅಟಲ್‌ ಪಿಂಚಣಿ ಯೋಜನೆ ವಿಸ್ತರಣೆಗೆ ಅಸ್ತು

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 16:30 IST
Last Updated 21 ಜನವರಿ 2026, 16:30 IST
–
   

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್‌ ಪಿಂಚಣಿ ಯೋಜನೆಯನ್ನು 2030–31ನೇ ಹಣಕಾಸು ವರ್ಷದ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯು, ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕೆ ರೂಪಿಸಿರುವ ಯೋಜನೆಗಳಿಗೆ ಆರ್ಥಿಕ ನೆರವು ಮುಂದುವರಿಸುವುದಕ್ಕೂ ಅನುಮೋದನೆ ನೀಡಿದೆ ಎಂದು ಪ್ರಕಟಣೆ ತಿಳಿಸಿದೆ.

ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಆದಾಯ ಭದ್ರತೆ ಒದಗಿಸುವ ದೃಷ್ಟಿಯಿಂದ ಅಟಲ್‌ ಪಿಂಚಣಿ ಯೋಜನೆಯನ್ನು 2015ರ ಮೇ 9ರಂದು ಆರಂಭಿಸಲಾಯಿತು. ಪ್ರಸ್ತುತ, 8.66 ಕೋಟಿ ಜನರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.

ADVERTISEMENT

ನೋಂದಾಯಿತ ಸದಸ್ಯರು ಪಾವತಿಸಿದ ವಂತಿಗೆ ಆಧಾರದಲ್ಲಿ, ಫಲಾನುಭವಿಗೆ 60 ವರ್ಷ ತುಂಬಿದ ನಂತರ ಮಾಸಿಕ ಕನಿಷ್ಠ ಒಂದು ಸಾವಿರ ರೂಪಾಯಿಯಿಂದ ₹5 ಸಾವಿರ ವರೆಗೆ ಪಿಂಚಣಿ ನೀಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.