ADVERTISEMENT

ವಾಜಪೇಯಿ 7ನೇ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಮೋದಿ ಸೇರಿ ಗಣ್ಯರಿಂದ ನಮನ

ಪಿಟಿಐ
Published 16 ಆಗಸ್ಟ್ 2025, 5:55 IST
Last Updated 16 ಆಗಸ್ಟ್ 2025, 5:55 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ  ಪುಷ್ಪ ನಮನ ಸಲ್ಲಿಸಿದರು</p></div>

ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಪುಷ್ಪ ನಮನ ಸಲ್ಲಿಸಿದರು

   

–ಎಕ್ಸ್‌ (ಟ್ವಿಟರ್) ಚಿತ್ರ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಏಳನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು (ಶನಿವಾರ) ಗೌರವ ಸಲ್ಲಿಸಿದ್ದಾರೆ.

ADVERTISEMENT

ರಕ್ಷಣಾ ಸಚಿವ ರಾಜನಾಥ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಹಲವು ಗಣ್ಯರು ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ.

‘ಅಟಲ್ ಜೀ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ಭಾರತದ ಸರ್ವತೋಮುಖ ಪ್ರಗತಿಗಾಗಿ ಅವರ ಸಮರ್ಪಣೆ ಮತ್ತು ಸೇವಾ ಮನೋಭಾವವು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಎಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇದೆ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ 2018ರ ಆಗಸ್ಟ್ 16ರಂದು ವಿಧಿವಶರಾಗಿದ್ದರು.

1998-2004ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ, ಬಿಜೆಪಿಯಿಂದ ರಾಷ್ಟ್ರದ ಪ್ರಧಾನ ಮಂತ್ರಿಯಾದ ಮೊದಲ ನಾಯಕ. ಅವರು ಮೂರು ಭಾರಿ ದೇಶದ ಪ್ರಧಾನಿಯಾಗಿದ್ದರು. 1996ರಲ್ಲಿ ಮತ್ತು 1998 ರಿಂದ 2004ರ ನಡುವೆ ಎರಡು ಅವಧಿಗೆ ಪ್ರಧಾನಿಯಾಗಿ ಸೇವೆ‌ ಸಲ್ಲಿಸಿದ್ದರು.

ಡಿಸೆಂಬರ್ 25ರ ಅವರ ಜನ್ಮದಿನವನ್ನು ಬಿಜೆಪಿಯು ‘ಉತ್ತಮ ಆಡಳಿತ ದಿನ’ ಎಂದು ಆಚರಿಸುತ್ತದೆ. 2014ರಲ್ಲಿ ಅವರಿಗೆ ‘ಭಾರತ ರತ್ನ’ ದೊರಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.