ADVERTISEMENT

ಗಡ್‌ಚಿರೋಲಿ ಎನ್‌ಕೌಂಟರ್: 26 ನಕ್ಸಲರ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ನವೆಂಬರ್ 2021, 16:50 IST
Last Updated 13 ನವೆಂಬರ್ 2021, 16:50 IST
ಕಾರ್ಯಾಚರಣೆಯಲ್ಲಿ ನಿರತವಾಗಿರುವ ರಕ್ಷಣಾ ಸಿಬ್ಬಂದಿ (ಪಿಟಿಐ ಚಿತ್ರ)
ಕಾರ್ಯಾಚರಣೆಯಲ್ಲಿ ನಿರತವಾಗಿರುವ ರಕ್ಷಣಾ ಸಿಬ್ಬಂದಿ (ಪಿಟಿಐ ಚಿತ್ರ)   

ಮುಂಬೈ: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 26 ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸಗಡ ಗಡಿಗೆ ಸಮೀಪದಲ್ಲಿರುವಜಿಲ್ಲೆಯ ದನೋರಾ ಅರಣ್ಯ ವಲಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆ ಮತ್ತು ನಕ್ಸಲ್ ನಿಗ್ರಹ ದಳದ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಶುಕ್ರವಾರ ರಾತ್ರಿ ಆರಂಭವಾದ ಎನ್‌ಕೌಂಟರ್ ಈವರೆಗೂ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪೊಲೀಸರು ಮತ್ತು ರಕ್ಷಣಾ ಪಡೆಯಲ್ಲಿ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.