ADVERTISEMENT

ರಾಮೋಜಿ ಫಿಲ್ಮ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ರಾಮಮೋಹನ್ ರಾವ್ ನಿಧನ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 11:34 IST
Last Updated 22 ಅಕ್ಟೋಬರ್ 2022, 11:34 IST

ಹೈದರಾಬಾದ್: ರಾಮೋಜಿ ಫಿಲ್ಮ್ ಸಿಟಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಅಟ್ಲೂರಿ ರಾಮಮೋಹನ್ ರಾವ್ (87) ನಿಧನರಾದರು.

ಇಲ್ಲಿನಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಅವರು ಶನಿವಾರ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಭಾನುವಾರ ಜುಬಿಲಿ ಹಿಲ್ಸ್‌ನ ಮಹಾಪ್ರಸ್ಥಾನದಲ್ಲಿ ಬೆಳಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

ADVERTISEMENT

ರಾಮಮೋಹನ್ ರಾವ್ ದೀರ್ಘಕಾಲದವರೆಗೆ ರಾಮೋಜಿ ಗ್ರೂಪ್ ಆಫ್ ಕಂಪನಿ ಜೊತೆ ನಿಕಟ ಸಂಬಂಧ ಹೊಂದಿದ್ದರು. ಈನಾಡು ದಿನಪತ್ರಿಕೆ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.