ಎಐ ಚಿತ್ರ
ಮುಂಬೈ: ಎಟಿಎಮ್‌ನಲ್ಲಿ ಹಿರಿಯ ನಾಗರಿಕರೊಬ್ಬರಿಗೆ ಹಣ ಬಿಡಿಸಲು ಸಹಾಯ ಮಾಡುವ ನೆಪದಲ್ಲಿ, ವ್ಯಕ್ತಿಯೊಬ್ಬ ₹40 ಸಾವಿರ ಹಣವನ್ನು ಬಿಡಿಸಿಕೊಂಡು ಪರಾರಿಯಾಗಿರುವ ಘಟನೆಯು ಮುಂಬೈನಲ್ಲಿ ನಡೆದಿದೆ.
ಕಾಂದಿವಲಿ ಬಳಿಯ ಎಟಿಎಮ್‌ನಲ್ಲಿ 75 ವರ್ಷದ ಹಿರಿಯ ನಾಗರಿಕರೊಬ್ಬರಿಗೆ ಸಹಾಯ ಮಾಡುವ ನೆಪದಲ್ಲಿ, ಅವರ ಡೆಬಿಟ್ ಕಾರ್ಡ್‌ನಿಂದ ಹಣ ಬಿಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಹಣ ಕಳೆದುಕೊಂಡ ಹಿರಿಯ ನಾಗರಿಕರರು ದೂರು ದಾಖಲಿಸಿದ್ದಾರೆ. ಪ್ರಕರಣದ ವಿಚಾರಣೆ ಕೈಗೊಳ್ಳಲಾಗಿದ್ದು, ಎಟಿಎಮ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಯನ್ನು ಆರಿಫ್ ಅಲಿ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.