ಸಾಂದರ್ಭಿಕ ಚಿತ್ರ
ಮುಂಬೈ: ಮುಂಬೈ ನಗರದಲ್ಲಿ ದರೋಡೆಗೆ ಸಂಚು ರೂಪಿಸಿದ್ದ ನವದೆಹಲಿ ಮತ್ತು ಉತ್ತರ ಪ್ರದೇಶ ಮೂಲದ ಆರು ಮಂದಿಯನ್ನು ಭಾನುವಾರ ಬಂಧಿಸಿರುವ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು (ಎಟಿಎಸ್) ಅವರ ಬಳಿಯಿದ್ದ ನಾಡಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದೆ.
ಬೊರಿವಲಿ ರೈಲು ನಿಲ್ದಾಣದ ಬಳಿಯಿರುವ ಎಲ್ಲೋರ ಅತಿಥಿ ಗೃಹದಲ್ಲಿ ಕಾರ್ಯಾಚರಣೆ ನಡೆಸಿದ ಎಟಿಎಸ್ ಸಿಬ್ಬಂದಿ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ ಒಂದು ನಾಡಬಂದೂಕು, ಎರಡು ಪಿಸ್ತೂಲ್‌ಗಳು, ನಾಲ್ಕು ಮ್ಯಾಗಜಿನ್‌ಗಳು, 29 ಬುಲೆಟ್‌ಗಳು, ಚಾಕು, ಕಾರು ಮತ್ತು ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.