ನವದೆಹಲಿ: ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತ್ ಉಲ್ಲಾ ಖಾನ್ ಅವರನ್ನು ಫೆ. 24ರವರೆಗೆ ಬಂಧಿಸಬಾರದು ಎಂದು ಸ್ಥಳೀಯ ಕೋರ್ಟ್ ಆದೇಶಿಸಿದೆ.
ವಿಶೇಷ ನ್ಯಾಯಾಧೀಶರಾದ ಜಿತೇಂದ್ರ ಸಿಂಗ್ ಅವರು, ಈ ಪ್ರಕರಣದಲ್ಲಿ ತನಿಖಾಧಿಕಾರಿಗಳು ಬಯಸಿದಾಗ ಅಗತ್ಯ ಸಹಕಾರ ನೀಡಬೇಕು ಎಂದು ಶಾಸಕರಿಗೆ ಸೂಚಿಸಿದರು.
ಫೆ. 10ರಂದು ಜಾಮಿಯಾ ನಗರದಲ್ಲಿ ಶಾಸಕರ ನೇತೃತ್ವದ ಗುಂಪು ಪೊಲೀಸರ ಮೇಲೆ ಹಲ್ಲೆ ನಡೆಸಿದೆ ಎಂದು ಶಾಸಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಫೆ. 24ರ ಘಟನೆಗೆ ಸಂಬಂಧಿಸಿ ಸಿ.ಸಿ.ಟಿ.ವಿ ದೃಶ್ಯಗಳೂ ಸೇರಿ ಲಭ್ಯವುಳ್ಳ ಎಲ್ಲ ದಾಖಲೆ ಹಾಜರುಪಡಿಸಿ ಎಂದು ಪೊಲೀಸರಿಗೆ ಸೂಚಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.