ADVERTISEMENT

ಧರ್ಮ ಗ್ರಂಥ ಸುಡಲಾಗಿದೆ ಎಂಬ ವದಂತಿ: ನಾಗ್ಪುರದಲ್ಲಿ ಗುಂಪು ಘರ್ಷಣೆ

ಪಿಟಿಐ
Published 17 ಮಾರ್ಚ್ 2025, 16:45 IST
Last Updated 17 ಮಾರ್ಚ್ 2025, 16:45 IST
   

ನಾಗ್ಪುರ: ಔರಂಗಜೇಬನ ಸಮಾಧಿ ಕೆಡವುವಂತೆ ಹಿಂದೂಪರ ಸಂಘಟನೆ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪವಿತ್ರ ಗ್ರಂಥವನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳ ನಡುವೆ ಸೋಮವಾರ ಕೇಂದ್ರ ನಾಗ್ಪುರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಚಿಟ್ನಿಶ್ ಪಾರ್ಕ್‌ನಿಂದ ಶುಕ್ರವಾರಿ ತಲಾವ್ ರಸ್ತೆ ಬೆಲ್ಟ್‌ವರೆಗೆ ಹಿಂಸಾಚಾರದಿಂದ ಹೆಚ್ಚು ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿ ಕೆಲವು ನಾಲ್ಕು ಚಕ್ರದ ವಾಹನಗಳಿಗೆ ಗಲಭೆಕೋರರು ಬೆಂಕಿ ಹಚ್ಚಿದ್ದಾರೆ. ನಿವಾಸಿಗಳ ಮನೆಗಳ ಮೇಲೂ ಕಲ್ಲು ಎಸೆಯಲಾಗಿದೆ.

ಸಾವಿರಾರು ಸಂಖ್ಯೆಯಲ್ಲಿರುವ ಜನರನ್ನು ಚದುರಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ADVERTISEMENT

ಮಹಲ್ ಪ್ರದೇಶದ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆಯ ಬಳಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಸ್ವಲ್ಪ ಸಮಯದ ನಂತರ ಗಲಾಟೆ ಪ್ರಾರಂಭವಾಯಿತು ಎಂದು ಪೊಲಿಸರು ತಿಳಿಸಿದ್ದಾರೆ..

ಪೊಲೀಸರ ಪ್ರಕಾರ, ಆಂದೋಲನದ ಸಮಯದಲ್ಲಿ ಕುರಾನ್ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳು ಹರಡಿವೆ. ಬಜರಂಗದಳದ ಪ್ರತಿಭಟನೆಯ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ಹರಡಿದ್ದು, ಮುಸ್ಲಿಂ ಸಮುದಾಯದ ಸದಸ್ಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಪವಿತ್ರ ಗ್ರಂಥವನ್ನು ಸುಟ್ಟುಹಾಕಲಾಗಿದೆ ಎಂದು ಆರೋಪಿಸಿ ಸಂಜೆ ಗಣೇಶಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನ ನಂತರ, ಮಹಲ್, ಕೊತ್ವಾಲಿ, ಗಣೇಶಪೇಟೆ ಮತ್ತು ಚಿತನ್ವಿಸ್ ಪಾರ್ಕ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಮುಸ್ಲಿಂ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.