ರಾಹುಲ್ ಗಾಂಧಿ, ಫಿಲಿಪ್ ಗ್ರೀನ್
(ಚಿತ್ರ ಕೃಪೆ: X@AusHCIndia)
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಭಾರತದಲ್ಲಿನ ಆಸ್ಟ್ರೇಲಿಯಾದ ಹೈಕಮಿಷನರ್ ಫಿಲಿಪ್ ಗ್ರೀನ್ ಮಾತುಕತೆ ನಡೆಸಿದ್ದಾರೆ.
ಭಾರತ-ಆಸ್ಟ್ರೇಲಿಯಾ ದ್ವಿಪಕ್ಷೀಯ ಬಾಂಧವ್ಯ, ಇಂಡೋ-ಪೆಸಿಫಿಕ್ ಸೇರಿದಂತೆ ಜಗತ್ತಿನ ಸಮಕಾಲೀನ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ.
ರಾಹುಲ್ ಗಾಂಧಿ ಜತೆಗಿನ ಚಿತ್ರ ಹಂಚಿರುವ ಫಿಲಿಪ್ ಗ್ರೀನ್, ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಮಾಹಿತಿ ಹಂಚಿದ್ದಾರೆ.
'ಭಾರತದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವಸ್ತುನಿಷ್ಠ ಹಾಗೂ ಚಿಂತನಚೀಲ ಮಾತುಕತೆ ನಡೆಸಲಾಯಿತು. ಭಾರತ, ಆಸ್ಟ್ರೇಲಿಯಾ, ಇಂಡೋ-ಪೆಸಿಫಿಕ್ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಲಾಯಿತು. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಸಲು ಇನ್ನಷ್ಟು ಚರ್ಚೆಯನ್ನು ಎದುರು ನೋಡುತ್ತಿದ್ದೇವೆ' ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.