ADVERTISEMENT

ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಹಿಮಪಾತ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 14:13 IST
Last Updated 4 ಫೆಬ್ರುವರಿ 2023, 14:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲ ಜಿಲ್ಲೆಯ ಗುಲ್ಮಾರ್ಗ್‌ನ ಪ್ರಸಿದ್ಧ ಸ್ಕಿ (ಹಿಮದ ಮೇಲೆ ಜಾರುವ ಕ್ರೀಡೆ) ರೆಸಾರ್ಟ್‌ವೊಂದರ ಮೇಲೆ ಶನಿವಾರ ಬೆಳಿಗ್ಗೆ ಹಿಮಪಾತ ಸಂಭವಿಸಿದೆ. ಈವರೆಗೆ ಯಾವುದೇ ಸಾವಿನ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶವನ್ನು ‘ಕೆಂಪು ವಲಯ’ ವಲಯ ಎಂದು ಗುರುತಿಸಲಾಗಿತ್ತು. ಹೀಗಾಗಿ ಅಲ್ಲಿ ಓಡಾಟ ನಿಷೇಧಿಸಲಾಗಿತ್ತು. ಈ ಪ್ರದೇಶದಲ್ಲಿ ಯಾವುದೇ ಸಾಹಸ ಕ್ರೀಡೆಗಳನ್ನು ಕೈಗೊಳ್ಳದಂತೆ ಮತ್ತು ಪೊಲೀಸರಿಗೆ ಸಹಕರಿಸುವಂತೆ ಪ್ರವಾಸಿಗಳಿಗೆ ಸಲಹೆ ನೀಡಲಾಗಿತ್ತು ಎಂದು ಅವರು ತಿಳಿಸಿದರು.

ಪೋಲೆಂಡ್‌ನ ಇಬ್ಬರು ಪ್ರವಾಸಿಗರು ಬುಧವಾರ ಹಿಮಪಾತದಿಂದ ಮೃತಪಟ್ಟಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.