ADVERTISEMENT

ಲೈಂಗಿಕ ದೌರ್ಜನ್ಯ: ಅವಿಮುಕ್ತೇಶ್ವರಾನಂದ ವಿರುದ್ಧ ಪೋಕ್ಸೊದಡಿ ಎಫ್‌ಐಆರ್‌

ಪಿಟಿಐ
Published 22 ಫೆಬ್ರುವರಿ 2026, 14:27 IST
Last Updated 22 ಫೆಬ್ರುವರಿ 2026, 14:27 IST
ಅವಿಮುಕ್ತೇಶ್ವರಾನಂದ
ಅವಿಮುಕ್ತೇಶ್ವರಾನಂದ   

ಲಖನೌ, ಉತ್ತರಪ್ರದೇಶ (ಪಿಟಿಐ): ಕಳೆದ ವರ್ಷ ಕುಂಭಮೇಳದ ವೇಳೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರಯಾಗರಾಜ್‌ನ ಪೋಕ್ಸೊ ವಿಶೇಷ ನ್ಯಾಯಾಲಯವೊಂದು ಶನಿವಾರ ಆದೇಶ ನೀಡಿತ್ತು. ಆದೇಶದಂತೆ, ಝೂಸಿ ಪೊಲೀಸ್‌ ಠಾಣೆಯಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ, ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ಹಾಗೂ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವಾರಾಣಸಿಯಲ್ಲಿರುವ ಆಶ್ರಮದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅರೋಪಿಸಿ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಅಶುತೋಷ್‌ ಬ್ರಹ್ಮಚಾರಿ ಅರ್ಜಿಯನ್ನು ಸಲ್ಲಿಸಿದ್ದರು.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಕ್ಕಳ ಹೇಳಿಕೆ ದಾಖಲಿಸಿಕೊಂಡು, ಪೊಲೀಸ್‌ ವರದಿಯನ್ನು ಪರಿಶೀಲಿಸಿದ್ದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.