ADVERTISEMENT

ರಾಜಸ್ಥಾನ ಕಾಂಗ್ರೆಸ್‌ ಉಸ್ತುವಾರಿಯಾಗಿ ಅಜಯ್‌ ಮಾಕೇನ್ ನೇಮಕ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 4:35 IST
Last Updated 17 ಆಗಸ್ಟ್ 2020, 4:35 IST
ಅಜಯ್‌ ಮಾಕೇನ್‌
ಅಜಯ್‌ ಮಾಕೇನ್‌   

ನವದೆಹಲಿ: ರಾಜಸ್ಥಾನ ಕಾಂಗ್ರೆಸ್‌ ಉಸ್ತುವಾರಿಯಾಗಿ ದೆಹಲಿಯ ಅಜಯ್‌ ಮಾಕೇನ್‌ ಅವರನ್ನು ನೇಮಕ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಅವಿನಾಶ್‌ ಪಾಂಡೇ ಅವರನ್ನು ರಾಜಸ್ಥಾನ ಉಸ್ತುವಾರಿ ಸ್ಥಾನದಿಂದ ಕೆಳಗಿಸಲಾಗಿದ್ದು ಆ ಸ್ಥಾನಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಅಜಯ್‌ ಮಾಕೇನ್‌ ಅವರನ್ನು ನೇಮಕ ಮಾಡಲಾಗಿದೆ.

ಈ ನೇಮಕದಿಂದ ಸಚಿನ್‌ ಪೈಲಟ್‌ ಬಣಕ್ಕೆ ಆರಂಭಿಕ ಗೆಲುವು ಸಿಕ್ಕಂತಾಗಿದೆ. ಅವಿನಾಶ್‌ ಪಾಂಡೇ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ತುಂಬಾ ಆಪ್ತರಾಗಿದ್ದು ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತಿಲ್ಲ ಎಂದು ಸಚಿನ್‌ ಬಣ ಆರೋಪಿಸಿತ್ತು. ಅವಿನಾಶ್‌ ಪಾಂಡೇ ಅವರನ್ನು ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು.

ADVERTISEMENT

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬೇಕು ಮತ್ತು ತಮ್ಮ ಆಪ್ತರಿಗೆ ಹೆಚ್ಚಿನ ಖಾತೆಗಳನ್ನು ನೀಡಬೇಕು ಎಂದು ಸಚಿನ್‌ ಬಣ ಪಟ್ಟುಹಿಡಿದಿದೆ. ಸದ್ಯಕ್ಕೆ ಹೈಕಮಾಂಡ್‌ ಪಾಂಡೇ ಅವರನ್ನು ತೆಗೆದುಹಾಕಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂಬ ಸೂಚನೆಯನ್ನು ನೀಡಿದೆ. ಹೈಕಮಾಂಡ್‌ನ ಈ ನಡೆಯನ್ನು ಸಚಿನ್‌ ಪೈಲಟ್‌ ಸ್ವಾಗತಿಸಿದ್ದಾರೆ.

ರಾಜಸ್ಥಾನದ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅಜಯ್ ಮಾಕೆನ್ ಅವರಿಗೆ ಅಭಿನಂದನೆಗಳು. ನಿಮ್ಮ ಈ ನೇಮಕವು ಖಂಡಿತವಾಗಿಯೂ ರಾಜಸ್ಥಾನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ ಎಂದು ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಕಳೆದೊಂದು ತಿಂಗಳಿಂದ ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿತ್ತು. ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದು ಪೈಲಟ್‌ ಬಣ ಒಂದು ತಿಂಗಳು ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು. ನಂತರ ರಾಜಿ ಸಂಧಾನದ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ ಸಮಸ್ಯೆಯನ್ನು ಬಗೆಹರಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.