ADVERTISEMENT

ಹೆಲಿಕಾಪ್ಟರ್‌ ದುರಂತದ ಬಗೆಗಿನ ಊಹಾಪೋಹಗಳನ್ನು ನಿಲ್ಲಿಸಬೇಕು: ವಾಯುಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಡಿಸೆಂಬರ್ 2021, 8:38 IST
Last Updated 10 ಡಿಸೆಂಬರ್ 2021, 8:38 IST
ದುರಂತದ ಚಿತ್ರ
ದುರಂತದ ಚಿತ್ರ    

ಬೆಂಗಳೂರು: ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ದುರಂತದ ಕುರಿತ ಊಹಾಪೋಹಗಳನ್ನು ನಿಲ್ಲಿಸಬೇಕು ಎಂದು ಭಾರತೀಯ ವಾಯುಪಡೆಯುವ ಶುಕ್ರವಾರ ಮನವಿ ಮಾಡಿದೆ.

‘ಡಿಸೆಂಬರ್ 8ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತದ ಕಾರಣದ ತನಿಖೆಗಾಗಿ ಭಾರತೀಯ ವಾಯುಪಡೆಯು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ರಚಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಸತ್ಯವನ್ನೂ ಹೊರತರಲಾಗುತ್ತದೆ. ಅಲ್ಲಿಯವರೆಗೆ, ಮಡಿದವರ ಘನತೆಯನ್ನು ಕಾಪಾಡಲು, ಮಾಹಿತಿ ಇಲ್ಲದ ಊಹಾಪೋಹಗಳನ್ನು ತಡೆಯಬೇಕು,’ ಎಂದು ವಾಯುಪಡೆಯ ಅಧಿಕೃತ ಟ್ವಿಟರ್‌ ಖಾತೆಯ ಮೂಲಕ ಶುಕ್ರವಾರ ಟ್ವೀಟ್‌ ಮಾಡಲಾಗಿದೆ.

ತಮಿಳುನಾಡಿನ ಕೂನೂರು ಸಮೀಪ ಬುಧವಾರ ಸೇನಾ ಹೆಲಿಕಾಪ್ಟರ್‌ ಪತನಗೊಂಡ ಪ್ರಕರಣದ ತನಿಖೆಯನ್ನು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ನಡೆಸಲಿದೆ. ಏರ್‌ ಮಾರ್ಷಲ್‌ ಮಾನವೇಂದ್ರ ಸಿಂಗ್‌ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ.

ADVERTISEMENT

ಅಂದು ನಡೆದ ದುರಂತದಲ್ಲಿ ಸೇನಾ ಪಡೆಗಳ ಮೊದಲ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌, ಅವರ ಪತ್ನಿ ಮಧುಲಿಕಾ ಮತ್ತು ಇತರ 11 ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.