ADVERTISEMENT

ಅಯೋಧ್ಯೆಯ ರಾಮ ಮಂದಿರಕ್ಕೆ ಇಂದು ಮುಂಜಾನೆಯಿಂದಲೇ ಭಕ್ತರ ದಂಡು:2 ಅವಧಿಯಲ್ಲಿ ದರ್ಶನ

ಇಂದಿನಿಂದ ( ಮಂಗಳವಾರ) ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜನವರಿ 2024, 5:04 IST
Last Updated 23 ಜನವರಿ 2024, 5:04 IST
<div class="paragraphs"><p>ಭಕ್ತರ ದಂಡು</p></div>

ಭಕ್ತರ ದಂಡು

   

ಅಯೋಧ್ಯೆ (ಉತ್ತರ ಪ್ರದೇಶ): ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿದ್ದು, ಇಂದಿನಿಂದ ( ಮಂಗಳವಾರ) ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮಂದಿರದ ನಿರ್ಮಾಣ ಮೇಲ್ವಿಚಾರಣೆ ನಡೆಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ.

ದರ್ಶನದ ಮೊದಲ ದಿನವಾದ ಇಂದು ರಾಮನಿಗೆ ಪ್ರಾರ್ಥನೆ ಸಲ್ಲಿಸಲು ಮುಂಜಾನೆ 3 ಗಂಟೆಯಿಂದಲೇ ದೇವಾಲಯದ ಮುಖ್ಯದ್ವಾರದ ಬಳಿ ಭಕ್ತರು ಕಾದು ನಿಂತಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ADVERTISEMENT

ದೇವಾಲಯದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿರುವ ದೃಶ್ಯಗಳು ವಿಡಿಯೊದಲ್ಲಿದೆ.

ಭಕ್ತರಿಗೆ ಬಾಲರಾಮನ ದರ್ಶನಕ್ಕಾಗಿ ಎರಡು ಅವಧಿಯನ್ನು ನಿಗದಿಪಡಿಸಲಾಗಿದೆ. ಮೊದಲ ಅವಧಿಯು ಬೆಳಿಗ್ಗೆ 7ರಿಂದ 11.30ರವರೆಗೆ ಮತ್ತು ಎರಡನೇ ಅವಧಿಯು ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಗದಿಪಡಿಸಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ನಿತ್ಯ ಸಂಜೆ 6.30ಕ್ಕೆ ವಿಶೇಷ ಭಜನೆ, ಶೃಂಗಾರ ಆರತಿ ಕಾರ್ಯಕ್ರಮ ನಡೆಯಲಿದ್ದು, ಒಂದು ದಿನ ಮೊದಲೇ ಭಕ್ತರು ತಮ್ಮ ಸ್ಥಾನವನ್ನು ಕಾಯ್ದಿರಿಸಬೇಕು ಎಂದು ಅವರು ತಿಳಿಸಿದ್ದಾರೆ.

ಸಂಜೆ 7 ಗಂಟೆಗೆ ಬಾಲರಾಮನಿಗೆ ಆರತಿ ನೆರವೇರಲಿದ್ದು, ಆರತಿ ದರ್ಶನಕ್ಕೆ ಬರುವ ಭಕ್ತರು ಟ್ರಸ್ಟ್ ಕಚೇರಿಯಲ್ಲಿ ಮುಂಚಿತವಾಗಿ ಪಾಸ್ ಪಡೆದಿರಬೇಕು ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.