ಅಯೋಧ್ಯೆ: ಅಯೋಧ್ಯೆಯಲ್ಲಿ ಇಂದು( ಸೋಮವಾರ) ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಮರಳಿನಲ್ಲಿ ಶ್ರೀರಾಮನ ಕಲಾಕೃತಿಯನ್ನು ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಈ ಶುಭ ಸಂದರ್ಭದಲ್ಲಿ ‘ನಿಮ್ಮ ಮನೆಗಳಲ್ಲಿ ರಾಮ ಜ್ಯೋತಿಯನ್ನು ಬೆಳಗಿಸಿ‘ ಎಂದು ಬರೆದುಕೊಂಡಿದ್ದಾರೆ.
ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಅಯೋಧ್ಯೆ ಸಜ್ಜಾಗಿದೆ. ಈ ನಡುವೆ ಮರಳಿನಲ್ಲಿ ಮೂಡಿಬಂದ ಶ್ರೀರಾಮನ ಮರಳಿನ ಕಲಾಕೃತಿ ಮತ್ತಷ್ಟು ಮೆರಗು ತಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.