ಸಮಾರಂಭದಲ್ಲಿ ಪ್ರಧಾನಿ ಮೋದಿ
ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕೇಸರಿ ಧ್ವಜ ಹಾರಿಸಿದರು. ರಾಮ ಮಂದಿರ ನಿರ್ಮಾಣದ ಔಪಚಾರಿಕವಾಗಿ ಪೂರ್ಣಗೊಂಡಿದ್ದರ ಸಂಕೇತವಾಗಿ ಈ ಧ್ವಜಾರೋಹಣ ಮಾಡಲಾಯಿತು.
ಸಮಾರಂಭದಲ್ಲಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇದ್ದರು.
10 ಅಡಿ ಎತ್ತರ ಮತ್ತು 20 ಅಡಿ ಉದ್ದದ ತ್ರಿಕೋನ ಧ್ವಜದಲ್ಲಿ ಪ್ರಕಾಶಮಾನ ಸೂರ್ಯನ ಚಿತ್ರ, ಪವಿತ್ರ ಸಂಕೇತ 'ಓಂ' ಮತ್ತು ಕೋವಿದಾರ ವೃಕ್ಷವನ್ನು ಒಳಗೊಂಡಿದೆ.
ಹಿಂದೂಗಳು ಶುಭವೆಂದು ಪರಿಗಣಿಸುವ ಗ್ರಹ ನಕ್ಷತ್ರಪುಂಜವಾದ 'ಅಭಿಜಿತ್ ಮುಹೂರ್ತ'ದಲ್ಲಿ ಧ್ವಜಾರೋಹಣವನ್ನು ಮಾಡಲಾಯಿತು ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
‘ರಾಮ ಮಂದಿರದ ನಿರ್ಮಾಣದ ಔಪಚಾರಿಕವಾಗಿ ಪೂರ್ಣಗೊಂಡಿದೆ ಎನ್ನುವುದರ ಸಂಕೇತ ಈ ಸಮಾರಂಭ’ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.