
ಅಹಮದ್ ಶೇಖ್
Credit: X@SanggitaT
ಲಖನೌ: ಅಯೋಧ್ಯೆಯ ರಾಮ ಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಶನಿವಾರ ಬಂಧಿಸಿದ್ದಾರೆ.
‘ಆರೋಪಿಯನ್ನು ಕಾಶ್ಮೀರದ ಅಹಮದ್ ಶೇಖ್ (50) ಎಂದು ಗುರುತಿಸಲಾಗಿದೆ. ಸ್ಥಳೀಯರು ಆತ ನಮಾಜ್ ಮಾಡುವುದನ್ನು ತಡೆಯಲು ಯತ್ನಿಸಿದಾಗ ಆತ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾನೆ. ಬಳಿಕ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು, ರಾಮ ಜನ್ಮಭೂಮಿ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಾಥಮಿಕ ತನಿಖೆಯಿಂದ ಆ ವ್ಯಕ್ತಿ ಅಜ್ಮೀರ್‌ಗೆ ಪ್ರಯಾಣಿಸುತ್ತಿದ್ದ ಎಂದು ತಿಳಿದುಬಂದಿದೆ. ಆತನ ಬಳಿಯಿದ್ದ ಕೆಲವು ಒಣಹಣ್ಣುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಣ್ಣೆ ಬಟ್ಟೆ ಮಾರಾಟ ಮಾಡುತ್ತಿದ್ದ ಕೆಲ ಕಾಶ್ಮೀರಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ರಾಮ ಮಂದಿರವನ್ನು ಹೇಗೆ ಪ್ರವೇಶಿಸಿದ ಎಂದು ತನಿಖೆ ನಡೆಸಲಾಗುತ್ತಿದೆ. ಘಟನೆಯ ಕಾರಣದಿಂದ ರಾಮ ಮಂದಿರ ಸಂಕೀರ್ಣದ ಭದ್ರತೆಯ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.