ಧ್ವಜಾರೋಹಣ ಸಮಾರಂಭದಲ್ಲಿ ಪ್ರಧಾನಿ ಮೋದಿ
ಅಯೋಧ್ಯೆ: ಮಂಗಳವಾರ ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರದಲ್ಲಿ ಧ್ವಜಾರೋಹಣ ಸಮಾರಂಭದಲ್ಲಿ ಸೋನ್‌ಭದ್ರದ ಬುಡಕಟ್ಟು ಮತ್ತು ಅರಣ್ಯವಾಸಿ ಸಮುದಾಯಗಳ ಪ್ರತಿನಿಧಿಗಳು, ಬಾಬರಿ ಪ್ರಕರಣದ ದಾವೆದಾರನ ಮಗ ಸೇರಿದಂತೆ ಹಲವು ಮಂದಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡರು.
ಶ್ರೀ ರಾಮ ಮಂದಿರ ಟ್ರಸ್ಟ್‌ನಿಂದ ಆಹ್ವಾನಿಸಲ್ಪಟ್ಟವರಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರು ಭವ್ಯ ಸ್ವಾಗತ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಮ ಮಂದಿರ ಟ್ರಸ್ಟ್ ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ಅತಿಥಿಗಳ ವಸತಿಗೆ ವ್ಯವಸ್ಥೆ ಮಾಡಿ, ಎಲ್ಲಾ ಮೂಲಭೂತ ಸೌಕರ್ಯಗಳನ್ನು ಖಚಿತಪಡಿಸಿವೆ ಎಂದು ಅವರು ಹೇಳಿದ್ದಾರೆ.
ಆತಿಥ್ಯಕ್ಕಾಗಿ ಅತಿಥಿಗಗಳು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಅಯೋಧ್ಯೆ ಮೇಯರ್ ಗಿರೀಶ್ ಪಾಟಿ ತ್ರಿಪಾಠಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.