ADVERTISEMENT

ಅಯೋಧ್ಯೆ ತೀರ್ಪು: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ಮರುಪರಿಶೀಲನಾ ಅರ್ಜಿ

ಏಜೆನ್ಸೀಸ್
Published 17 ನವೆಂಬರ್ 2019, 13:07 IST
Last Updated 17 ನವೆಂಬರ್ 2019, 13:07 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ:ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲಾಗುವುದು ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಭಾನುವಾರ ತಿಳಿಸಿದೆ.

ಒಂದು ತಿಂಗಳ ಒಳಗಾಗಿ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು ಮಂಡಳಿ ತಿಳಿಸಿರುವುದಾಗಿಎನ್‌ಡಿಟಿವಿವರದಿ ಮಾಡಿದೆ.

‘ಮಸೀದಿಗೆ ಬದಲಾಗಿ ಯಾವುದೇ ಭೂಮಿಯನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ’ ಎಂದು ಮಂಡಳಿ ಹೇಳಿದೆ.

ADVERTISEMENT

ಅಯೋಧ್ಯೆ ವಿಚಾರಕ್ಕೆ ಸಂಬಂಧಿಸಿ ಇತ್ತೀಚೆಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವಿವಾದಿತ 2.77 ಎಕರೆ ಜಾಗವನ್ನು ರಾಮಮಂದಿರ ನಿರ್ಮಾಣಕ್ಕೆ ನೀಡುವಂತೆಯೂ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್‌ ಮಂಡಳಿಗೆ ಬೇರೆ ಕಡೆ 5 ಎಕರೆ ಭೂಮಿ ನೀಡುವಂತೆಯೂ ಸರ್ಕಾರಕ್ಕೆ ಆದೇಶ ನೀಡಿತ್ತು.

ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಿಲ್ಲ ಎಂದು ಪ್ರಕರಣದ ಕಕ್ಷಿದಾರ ಸುನ್ನಿ ವಕ್ಫ್‌ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ.

ಅಯೋಧ್ಯೆ ಪ್ರಕರಣದಲ್ಲಿಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕಕ್ಷಿದಾರ ಅಲ್ಲ. ಆದರೆ ಅರ್ಜಿದಾರರಿಗೆ ಆರ್ಥಿಕವಾಗಿ ಮತ್ತು ಕಾನೂನು ಹೋರಾಟದಲ್ಲಿ ನೆರವಾಗಿದೆ. ಹೆಚ್ಚಿನ ಅರ್ಜಿದಾರರು ಮರುಪರಿಶೀಲನಾ ಅರ್ಜಿ ಸಲ್ಲಿಸಲು ಬಯಸಿದ್ದಾರೆ ಎಂದುಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.