ADVERTISEMENT

ತೀರ್ಪಿನ ಬಗ್ಗೆ ಗೌರವ ಇದೆ, ತೃಪ್ತಿಯಿಲ್ಲ: ಸುನ್ನಿ ವಕ್ಫ್‌ ಮಂಡಳಿ ವಕೀಲ ಜಿಲಾನಿ

ಆದೇಶ ಪ‍ರಿಶೀಲಿಸಿ ಮುಂದಿನ ಕ್ರಮ ಎಂದ ಮಂಡಳಿ

ಏಜೆನ್ಸೀಸ್
Published 9 ನವೆಂಬರ್ 2019, 6:49 IST
Last Updated 9 ನವೆಂಬರ್ 2019, 6:49 IST
 ಸುನ್ನಿ ವಕ್ಫ್‌ ಮಂಡಳಿ ಪರ ವಕೀಲ ಜಾಫರ್‌ಯಾಬ್ ಜಿಲಾನಿ ಪತ್ರಿಕಾಗೋಷ್ಠಿ–ಎಎನ್‌ಐ ಚಿತ್ರ
ಸುನ್ನಿ ವಕ್ಫ್‌ ಮಂಡಳಿ ಪರ ವಕೀಲ ಜಾಫರ್‌ಯಾಬ್ ಜಿಲಾನಿ ಪತ್ರಿಕಾಗೋಷ್ಠಿ–ಎಎನ್‌ಐ ಚಿತ್ರ   

ನವದೆಹಲಿ:ಸುಪ್ರೀಂ ಕೋರ್ಟ್‌ ತೀರ್ಪನ್ನು ನಾವು ಗೌರವಿಸುತ್ತೇವೆ, ಆದರೆ ನಾವು ಇದರಿಂದ ತೃಪ್ತಿ ಹೊಂದಿಲ್ಲ. ಮುಂದಿನ ನಿರ್ಧಾರದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಸುನ್ನಿವಕ್ಫ್‌ ಮಂಡಳಿ ಪರ ವಕೀಲ ಜಾಫರ್‌ಯಾಬ್ ಜಿಲಾನಿ ಹೇಳಿದರು.

ವಿವಾದಿತ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ತೀರ್ಪಿನ ಕೆಲವು ಅಂಶಗಳನ್ನು ಒಪ್ಪುವುದು ಸಾಧ್ಯವಿಲ್ಲ. ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಜಾಗ ನೀಡಿದ್ದನ್ನು ಒಪ್ಪಲಾಗದು. ಈ ತೀರ್ಪನ್ನು ನ್ಯಾಯ ಅಂತ ಸ್ವೀಕರಿಸಲು ಸಾಧ್ಯವಿಲ್ಲ’ ಎಂದರು.

ತೀರ್ಪಿನ ಬಗ್ಗೆ ಅಧ್ಯಯನ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ತೀರ್ಪಿನ ಮರುಪರಿಶೀಲನೆಗೆ ಮನವಿ ಸಲ್ಲಿಸಬೇಕೇ ಎಂಬ ಬಗ್ಗೆ ಯೋಚಿಸಿನಿರ್ಧಾರ ಕೈಗೊಳ್ಳಲಿದ್ದೇವೆ ಎಂದುಜಿಲಾನಿ ತಿಳಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.