ನವದೆಹಲಿ: ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಅವರು ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಸರ್ ಗಂಗಾ ರಾಮ ಆಸ್ಪತ್ರೆಗೆ ಭಾನುವಾರ ದಾಖಲಾಗಿದ್ದಾರೆ.
ಸದ್ಯ ಅವರು ಆರೋಗ್ಯವಾಗಿದ್ದು, ಎಂದಿನಂತೆ ವೈದ್ಯಕೀಯ ತಪಾಸಣೆಗಾಗಿ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆಜಂ ಖಾನ್ ಅವರು ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬಳಿಕ ಉತ್ತರ ಪ್ರದೇಶದ ಸೀತಾಪುರ ಕಾರಾಗೃಹದಿಂದ ಮೇ 20 ರಂದು ಬಿಡುಗಡೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.