ADVERTISEMENT

ಎಸ್‌ಪಿ ಮುಖಂಡ ಆಜಂ ಖಾನ್ ಶಾಸಕ ಸ್ಥಾನದಿಂದ ಅನರ್ಹ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 15:56 IST
Last Updated 28 ಅಕ್ಟೋಬರ್ 2022, 15:56 IST
   

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಅವರನ್ನು ಶುಕ್ರವಾರ ಶಾಸಕ ಸ್ಥಾನದಿಂದಲೂ ಅನರ್ಹಗೊಳಿಸಲಾಗಿದೆ.

ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಭಾರತೀಯ ಆಡಳಿತ ಸೇವೆ ಅಧಿಕಾರಿ ವಿರುದ್ಧ ದ್ವೇಷ ಭಾಷಣ ಮಾಡಿದ ಆಜಂ ಖಾನ್‌ ಅವರಿಗೆ ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯವು ಗುರುವಾರ 3 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅದರ ಬೆನ್ನಲ್ಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದಾಗಿ ಉತ್ತರ ಪ್ರದೇಶ ವಿಧಾನಸಭಾ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ದುಬೆ ಹೇಳಿದ್ದಾರೆ.

ಖಾನ್‌ ಪ್ರತಿನಿಧಿಸುತ್ತಿದ್ದ ರಾಂಪುರ ಸರ್ದಾರ ಕ್ಷೇತ್ರ ತೆರವುಗೊಂಡಿರುವುದಾಗಿ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಮತ್ತು ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.