ADVERTISEMENT

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಉದ್ಧವ್‌ ಠಾಕ್ರೆ ಹೇಳಿಕೆಗೆ ಆಕ್ರೋಶ

ಪಿಟಿಐ
Published 4 ಮಾರ್ಚ್ 2021, 15:54 IST
Last Updated 4 ಮಾರ್ಚ್ 2021, 15:54 IST
ಉದ್ಧವ್‌ ಠಾಕ್ರೆ
ಉದ್ಧವ್‌ ಠಾಕ್ರೆ   

ಮುಂಬೈ: ಮಹಾರಾಷ್ಟ್ರಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಬಾಬ್ರಿ ಮಸೀದಿ ಧ್ವಂಸ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಅವರು ಗುರುವಾರ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯದ ಮುಸ್ಲಿಂ ಸಚಿವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಾಜಿ ಕಾಂಗ್ರೆಸ್‌ ಸಂಸದ ಸಂಜಯ್‌ ನಿರುಪಮ್‌ ಅವರು ಸಹ ಠಾಕ್ರೆ ಹೇಳಿಕೆಯನ್ನು ಖಂಡಿಸಿದ್ದಾರೆ.

ವಿಧಾನಭವನದ ಹೊರಗಡೆ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅಜ್ಮಿ ಅವರು, ‘ಠಾಕ್ರೆ ಅವರು ಶಿವಸೇನಾ ಪಕ್ಷದ ಅಧ್ಯಕ್ಷರಷ್ಟೇ ಅಲ್ಲ, ಅವರು ರಾಜ್ಯದ ಮುಖ್ಯಮಂತ್ರಿಗಳು ಎಂಬುದನ್ನು ಮರೆಯಬಾರದು‘ ಎಂದರು.

ADVERTISEMENT

ಇದೇ ವೇಳೆ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ವಿರುದ್ಧವೂ ಅವರು ಹರಿಹಾಯ್ದರು. ‘ಈ ಎಲ್ಲಾ ಪಕ್ಷಗಳು ಈ ಹಿಂದೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇಕಡ 5ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದ್ದವು. ಆದರೆ ಇದ್ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ. ಠಾಕ್ರೆ ಹೇಳಿಕೆ ಹಾಗೂ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು‘ ಎಂದು ಒತ್ತಾಯಿಸಿದ್ದಾರೆ.

ಬಾಬ್ರಿ ಮಸೀದಿ ಧ್ವಂಸಗೊಂಡ ಬಳಿಕ ಬಾಳ್‌ ಠಾಕ್ರೆ ಅವರು ಅದನ್ನು ಪ್ರಬಲವಾಗಿ ಸಮರ್ಥಿಸಿದ್ದರು ಎಂದು ಉದ್ಧವ್‌ ಠಾಕ್ರೆ ಬುಧವಾರ ರಾಜ್ಯದ ವಿಧಾನಸಭೆಯಲ್ಲಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.